PM Kisan Scheme : ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ವರ್ಷಕ್ಕೆ ಮೂರು ಬಾರಿ ನೀಡಲಾಗುವ ಕಂತಿನ ಹಣ ಅಕ್ಟೋಬರ್ ಮೊದಲ ವಾರದಲ್ಲಿ ಖಾತೆಗೆ ₹2000 ಜಮೆ ಆಗಲಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಹಾಗು ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
ಹೌದು, 2019ರಲ್ಲಿ ಆರಂಭವಾದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಎಲ್ಲಾ ನೊಂದಾಯಿತ ರೈತರಿಗೆ ವರ್ಷಕ್ಕೆ ಮೂರು ಕಂತುಗಳಲ್ಲಿ 6,000 ರೂ. ಹಣವನ್ನು ಸರ್ಕಾರ ಸಹಾಯಧನವಾಗಿ ನೀಡುತ್ತದೆ. ಪ್ರತೀ ಕಂತಿನಲ್ಲೂ ರೈತರಿಗೆ 2,000 ರೂ ಸಿಗುತ್ತದೆ. ಈವರೆಗೆ 17 ಕಂತಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಈರುಳ್ಳಿ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್; ಕೆಜಿಗೆ ₹70 ಇದ್ದ ಈರುಳ್ಳಿ ಬೆಲೆ ಕೇವಲ ₹35ಕ್ಕೆ ಮಾರಾಟ!
ಅಕ್ಟೊಬರ್ 5ಕ್ಕೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ರಿಲೀಸ್ ಆಗಲಿದೆ. ನೀವು ಈಗಾಗಲೇ ಸ್ಕೀಮ್ಗೆ ನೊಂದಾಯಿಸಿದ್ದು ಇನ್ನೂ ಕೂಡ ಕಂತಿನ ಹಣ ಬಂದಿಲ್ಲ ಎಂದಿದ್ದರೆ ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿ ಇದೆಯಾ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ.
PM Kisan Scheme : ಪಿಎಂ ಕಿಸಾನ್ ಯೋಜನೆಯ ಹಣ ಪರಿಶೀಲನೆ ಹೇಗೆ?
ಪಿಎಂ ಕಿಸಾನ್ ನೋಂದಾಯಿಸಿರುವ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಲು ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ. ಪುಟದ ಬಲಭಾಗದಲ್ಲಿರುವ ‘ನಿಮ್ಮ ಸ್ಥಿತಿಯನ್ನು ತಿಳಿಯಿರಿ’ ಎಂಬ ಟ್ಯಾಬ್ ಅನ್ನು ಕ್ಲಿಕ್ ಮಾಡಿ. ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಕ್ಯಾಪ್ಚಾ ಕೋಡ್ ಅನ್ನು ಭರ್ತಿ ಮಾಡಿ ಮತ್ತು ‘ಡೇಟಾ ಪಡೆಯಿರಿ’ ಎಂಬ ಆಯ್ಕೆಯನ್ನು ಆರಿಸಿ. ಬಳಿಕ ಫಲಾನುಭವಿಯ ಸ್ಥಿತಿಯು ಪರದೆಯ ಮೇಲೆ ಬರುತ್ತದೆ.
ಇದನ್ನೂ ಓದಿ: ಹೊಟ್ಟೆಯ ಗ್ಯಾಸ್ ಸಮಸ್ಯೆ ಎದುರಿಸುತ್ತಿದ್ದೀರಾ ? ನಿಮಗಾಗಿ ಇಲ್ಲಿದೆ ಸುಲಭ ಮಾರ್ಗ!
PM Kisan Scheme : ಹಣ ಬಂದಿಲ್ಲ ಅಂದ್ರೆ ಹೀಗೆ ಮಾಡಿ
ಪಿಎಂ ಕಿಸಾನ್ ಅಡಿಯಲ್ಲಿನ ಮೊತ್ತವನ್ನು ನೇರವಾಗಿ ಫಲಾನುಭವಿಯ ಖಾತೆಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಜಮಾ ಮಾಡಲಾಗುತ್ತದೆ. ಆದ್ದರಿಂದ, ರೈತರ ಬ್ಯಾಂಕ್ ಖಾತೆಯನ್ನು ಅವರ ಆಧಾರ್‌ನೊಂದಿಗೆ ಲಿಂಕ್ ಮಾಡುವುದು ಅತ್ಯಗತ್ಯ. ಯಾವುದೇ ಅಡೆತಡೆಗಳನ್ನು ತಪ್ಪಿಸಲು ರೈತರು ತಮ್ಮ ಖಾತೆಯಲ್ಲಿ ಡಿಬಿಟಿ ಆಯ್ಕೆಯನ್ನು ಸಕ್ರಿಯಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಇದನ್ನೂ ಓದಿ: ವಾಹಾನ ಸವಾರರೆ ಗಮನಿಸ; ಆರ್‌ಸಿ, ಡ್ರೈವಿಂಗ್ ಲೈಸೆನ್ಸ್‌ನಲ್ಲಿ ಮಹತ್ವದ ಬದಲಾವಣೆ.!