PM Kisan Yojana : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ (PM Kisan Yojana) , ರೈತರಿಗೆ ಪ್ರತಿ ವರ್ಷ ₹6,000 ಆರ್ಥಿಕ ಸಹಾಯ ನೀಡಲಾಗುತ್ತದೆ. ಈ ಮೊತ್ತವನ್ನು 3 ಕಂತುಗಳಲ್ಲಿ ನೀಡಲಾಗುತ್ತಿದ್ದು, ಪ್ರತಿ 4 ತಿಂಗಳಿಗೊಮ್ಮೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ.
ಇದುವರೆಗೆ 18 ಕಂತುಗಳನ್ನು ಬಿಡುಗಡೆಯಾಗಿದ್ದು, ಇದೀಗ ರೈತರು 19ನೇ ಕಂತಿನ ಹಣಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಫೆಬ್ರವರಿ 24ರಂದು ಬಿಹಾರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ 19ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ನೇರ ಲಾಭ ವರ್ಗಾವಣೆ ವ್ಯವಸ್ಥೆಯಡಿಯಲ್ಲಿ ಈ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದೃಢಪಡಿಸಿದ್ದಾರೆ.
ಇದನ್ನೂ ಓದಿ: Hanumantha Lamani | ಬಿಗ್ ಬಾಸ್ ನಲ್ಲಿ ಗೆದ್ದ ಹಣವನ್ನು ಯಾವ ಕೆಲಸಕ್ಕೆ ಬಳಸುತ್ತಾರಂತೆ ಗೊತ್ತಾ ಹನುಮಂತು?
PM Kisan Yojana : ಜ. 31 ರೊಳಗೆ ಕೆವೈಸಿ ಪೂರ್ಣಗೊಳಿಸಲು ಸೂಚನೆ
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತು ಫೆಬ್ರವರಿಯಲ್ಲಿ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಆಗಲಿದೆ ಎಂದು ಹೇಳಲಾಗಿದೆ. ಆದರೆ ಈ ಬಾರಿ ಕೇಂದ್ರ ಸರ್ಕಾರಿ ಅಧಿಕಾರಿಗಳು ಪಿಎಂ ಕಿಸಾನ್ ಕೆವೈಸಿ ಪ್ರಕ್ರಿಯೆಯನ್ನು ಜನವರಿ 31 ರೊಳಗೆ ಪೂರ್ಣಗೊಳಿಸಬೇಕು, ಇಲ್ಲದಿದ್ದರೆ 19 ನೇ ಕಂತು ಖಾತೆಗೆ ಜಮಾ ಆಗುವುದಿಲ್ಲ ಎಂದು ಹೇಳಿದ್ದಾರೆ. ಅಧಿಕೃತ ವೆಬ್‌ಸೈಟ್ ಅಥವಾ ಸಾಮಾನ್ಯ ಸೇವಾ ಕೇಂದ್ರ (CSC) ಗೆ ಭೇಟಿ ನೀಡಿ KYC ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ.
ಇದನ್ನೂ ಓದಿ: ಬಿಗ್ ಬಾಸ್‌ನಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ ಹನುಮಂತನಿಗೆ ಸಿಗುವ ಹಣ ಎಷ್ಟು ಗೊತ್ತಾ..?