ನವದೆಹಲಿ: ಕೋರೋನ ಹೆಚ್ಚಾಗುತ್ತಿರುವ ಹಿನ್ನಲೆ, ಕೊರೋನಾ ಸೋಂಕು ಹಬ್ಬುವುದನ್ನು ತಡೆಯಲು ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಹೇಳುವುದರ ಜೊತೆಗೆ ಟೆಸ್ಟ್, ಟ್ರ್ಯಾಕ್, ಟ್ರೀಟ್ ಅನ್ನು ತೀವ್ರಗೊಳಿಸಬೇಕು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಸಂವಾದ ನಡೆಸಿದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಅವರು, ಮಾಸ್ಕ್ ಧರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಬೇಕು. ದೇಶದಲ್ಲಿ ಲಸಿಕೆ ಅಭಿಯಾನವನ್ನು ಹೆಚ್ಚಿಸಬೇಕು. ಪ್ರತಿಯೊಂದು ರಾಜ್ಯಗಳು ಟೆಸ್ಟ್, ಟ್ರ್ಯಾಕ್, ಟ್ರೀಟ್ ಅನ್ನು ತೀವ್ರಗೊಳಿಸಬೇಕು. ಜೊತೆಗೆ ಮೈಕ್ರೋ ಕಂಟೋನ್ಮೆಂಟ್ ಜೋನ್ ಗಳನ್ನು ಗುರುತಿಸಿ ಸೋಂಕಿತರಿಗೆ ತ್ವರಿತ ಚಿಕಿತ್ಸೆ ನೀಡಬೇಕು ಎಂದು ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಸಿಎಂಗಳಿಗೆ ಸೂಚನೆ ನೀಡಿದ್ದಾರೆ.