ಅಹಮದಾಬಾದ್: ಭಾರತದ 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಸಬರಮತಿ ಆಶ್ರಮದಿಂದ ದಂಡಿವರೆಗೆ ಇಂದಿನಿಂದ ಪಾದಯಾತ್ರೆ ಕೈಗೊಳ್ಳಲಾಗುತ್ತದೆ.
ಈ ಪಾದಯಾತ್ರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಾಲನೆ ನೀಡಲಿದ್ದು, ಈ ಪಾದಯಾತ್ರೆಯು ‘ಆಜಾದಿ ಕಾ ಅಮೃತ್ ಮಹೋತ್ಸವ್’ ಹೆಸರಿನಲ್ಲಿ ಆರಂಭವಾಗಲಿದೆ. ಮಹಾತ್ಮ ಗಾಂಧಿಜಿ ಅವರು 1930ರಲ್ಲಿ ಉಪ್ಪಿನ ಕಾನೂನನ್ನು ಮುರಿಯಲು ಇದೇ ದಿನ ದಂಡಿ ಸತ್ಯಾಗ್ರಹ ಕೈಗೊಂಡಿದ್ದರು.
‘ಆಜಾದಿ ಕಾ ಅಮೃತ್ ಮಹೋತ್ಸವ್’ ಹೆಸರಿನ ಈ ಬೃಹತ್ ಪಾದಯಾತ್ರೆಯಲ್ಲಿ 81 ಜನ ಪ್ರಮುಖರು ಭಾಗಿಯಾಗಲಿದ್ದಾರೆ ತಿಳಿದು ಬಂದಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.