ದಾವಣಗೆರೆ ಜ.24 : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕಿಯ ತರಬೇತಿ ಕೇಂದ್ರದಲ್ಲಿ ಕೋಳಿ ಸಾಕಾಣಿಕೆ ತರಬೇತಿಯನ್ನು ಜನವರಿ 27 ರಂದು ಬೆಳೆಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಹಮ್ಮಿಕೊಳ್ಳಲಾಗಿದೆ.
ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ.್ಲ ಆಸಕ್ತಿಯುಳ್ಳ ರೈತರು, ಮಹಿಳೆಯರು, ನಿರುದ್ಯೋಗ ಯುವಕ/ಯುವತಿಯರು ಇದರ ಅನುಕೂಲ ಪಡೆಯಲು ಕೋರಲಾಗಿದೆ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್‍ಪೋರ್ಟ್ ಸೈಜ್ ಫೋಟೋ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ, ದಾವಣಗೆರೆ ಹಾಗೂ ದೂರವಾಣಿ ಸಂಖ್ಯೆ 08192-233787 ಕ್ಕೆ ಸಂಪರ್ಕಿಸಬಹುದು. ಎಂದು ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.