Mudra Loan Yojana: ಯಾವುದೇ ಗ್ಯಾರಂಟಿ ಇಲ್ಲದೆ ರೂ.10 ಲಕ್ಷ ಸಾಲ; ಮೋದಿ ಸರ್ಕಾರ ಪರಿಚಯಿಸಿದ ಯೋಜನೆಗೆ ಅರ್ಜಿ ಸಲ್ಲಿಸಿವುದು ಹೇಗೆ?

Mudra Loan Yojana Mudra Loan Yojana

Mudra Loan Yojana: ನೀವು ರೂ.10 ಲಕ್ಷದವರೆಗೆ ಸಾಲವನ್ನು ಪಡೆಯಲು ಬಯಸುವಿರಾ? ಅಗಾದರೆ ನಿಮಗೆ ಒಳ್ಳೆಯ ಸುದ್ದಿ. ಮುದ್ರಾ ಯೋಜನೆಯಡಿ ಸಾಲ ಪಡೆಯಬಹುದು. ಈ ಮುದ್ರಾ ಸಾಲವು (Mudra loan) ವ್ಯಾಪಾರವನ್ನು ಪ್ರಾರಂಭಿಸಲು ಮತ್ತು ವ್ಯಾಪಾರವನ್ನು ವಿಸ್ತರಿಸಲು ಸಹಾಯ ಮಾಡುತ್ತದೆ. ಕೇಂದ್ರ ಸರ್ಕಾರ ಕಾಲಕಾಲಕ್ಕೆ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಲೇ ಇದ್ದು,ಸರ್ಕಾರದ ಯೋಜನೆಗಳಿಂದ ಜನರಿಗೆ ಅನುಕೂಲವಾಗಿದೆ.

Mudra Loan Yojana
Mudra Loan Yojana

ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯಡಿ 10 ಲಕ್ಷದವರೆಗೆ ಸಾಲ

ಹೌದು, ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆ ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ಒಂದಾಗಿದ್ದು, ದೇಶಾದ್ಯಂತ ಎಲ್ಲಾ ಸಣ್ಣ ವ್ಯಾಪಾರಿಗಳು ಇದನ್ನು ಪಡೆಯಬಹುದು. ಈ ಯೋಜನೆಯಲ್ಲಿ ನೀವು 10 ಲಕ್ಷದವರೆಗೆ ಸಾಲ ಪಡೆಯಬಹುದು. 3 ಅಥವಾ 5 ವರ್ಷಗಳಲ್ಲಿ ಪಾವತಿಸಬೇಕಾಗುತ್ತದೆ .

ಇದನ್ನು ಓದಿ: ಆಧಾರ್ ಹೊಂದಿರುವವರಿಗೆ ಎಚ್ಚರಿಕೆ; ಈ 2 ಕೆಲಸಗಳು ಈ ತಿಂಗಳಲ್ಲಿಯೇ ಪೂರ್ಣಗೊಳಿಸಿ..ಇಲ್ಲದಿದ್ದರೆ ಸಮಸ್ಯೆ..!

Advertisement

ಜನರಿಗೆ ಅವರ ಅಗತ್ಯಗಳಿಗೆ ಅನುಗುಣವಾಗಿ ಸಾಲದ ನೆರವು ನೀಡಲು ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಿದ್ದು, ಮುದ್ರಾ ಸಾಲ ಯೋಜನೆಯಡಿ (Mudra Loan Scheme) ನೀವು ರೂ.10 ಲಕ್ಷದವರೆಗೆ ಸಾಲ ಪಡೆಯಬಹುದು. ವಾಣಿಜ್ಯ ಬ್ಯಾಂಕುಗಳು, ಸಣ್ಣ ಹಣಕಾಸು ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು, MFI ಗಳು ಮತ್ತು NBFC ಗಳ ಮೂಲಕ ಉದ್ಯಮಿಗಳಿಗೆ ಈ ಮುದ್ರಾ ಸಾಲವನ್ನು (Mudra loan) ಒದಗಿಸಲಾಗುತ್ತದೆ.

ಇದನ್ನು ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ರೂ.37ಕ್ಕಿಂತ ಕಡಿಮೆ ಬೆಲೆಗೆ ಅಡುಗೆ ಎಣ್ಣೆ.. ಸರ್ಕಾರದ ಮಹತ್ವದ ನಿರ್ಧಾರ!

ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯಡಿ ಸಾಲ ಪಡೆಯುವುದು ಹೇಗೆ?

ನೀವು ನಿಮ್ಮ ಹತ್ತಿರದ ಬ್ಯಾಂಕ್‌ಗೆ ಹೋಗಿ ಈ ಸಾಲ ಯೋಜನೆಗಾಗಿ ಅರ್ಜಿ ನಮೂನೆಯನ್ನು ಸಲ್ಲಿಸಬಹುದಾಗಿದ್ದು, ಇದರೊಂದಿಗೆ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಹ ಸಲ್ಲಿಸಬೇಕಾಗುತ್ತದೆ. ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಗೆ ಆನ್‌ಲೈನ್‌ನಲ್ಲಿಯೂ ಅರ್ಜಿ ಸಲ್ಲಿಸಬಹುದು.

ಮುದ್ರಾ ಸಾಲ ಯೋಜನೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

  • ಪ್ರಧಾನ ಮಂತ್ರಿ ಮುದ್ರಾ ಯೋಜನೆ (Pradhan Mantri Mudra Yojana) ಪಡೆಯಲು, ಮೊದಲು ಅಧಿಕೃತ ವೆಬ್‌ಸೈಟ್ udyamimitra.in ಗೆ ಭೇಟಿ ನೀಡಬೇಕು.
  • ಮುಖಪುಟದಲ್ಲಿ ಮುದ್ರಾ ಲೋನ್‌ಗೆ ಅರ್ಜಿ (Application) ಸಲ್ಲಿಸುವ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
  • ನಂತರ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು SMS ಮೂಲಕ ಕಳುಹಿಸಲಾಗುತ್ತದೆ. ಎಲ್ಲಾ ಅಗತ್ಯ ದಾಖಲೆಗಳನ್ನು ಇಟ್ಟುಕೊಳ್ಳಿ .
  • ಇದರ ನಂತರ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ವಿನಂತಿಸಿದ ಎಲ್ಲಾ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಬೇಕು
  • ಇದರ ನಂತರ ಕ್ಯಾಪ್ಚಾ ಕೋಡ್ ನಮೂದಿಸಿ ಸಲ್ಲಿಸು (submit) ಮೇಲೆ ಕ್ಲಿಕ್ ಮಾಡಿ. ನಿಮ್ಮ ಅರ್ಜಿ ನಮೂನೆಯನ್ನು ಸ್ವೀಕರಿಸಲಾಗುತ್ತದೆ.

ಇದನ್ನು ಓದಿ: ಗುಪ್ತಚರ ಇಲಾಖೆಯಲ್ಲಿ ಭರ್ಜರಿ ನೇಮಕಾತಿ, 797 ಹುದ್ದೆಗಳಿಗೆ ಅರ್ಜಿ ಅಹ್ವಾನ

ಮುದ್ರಾ ಸಾಲ ಪಡೆಯಲು ಬೇಕಾಗುವ ಅರ್ಹತೆಗಳು ಮತ್ತು ದಾಖಲೆಗಳು

  • ಸಾಲ ಪಡೆಯಲು ನೀವು ಸಂಪೂರ್ಣ ವ್ಯಾಪಾರ ಯೋಜನೆಯನ್ನು ಹೊಂದಿರಬೇಕು.
  • ಇದರ ಹೊರತಾಗಿ ಆಧಾರ್ ಕಾರ್ಡ್, ಪಾಸ್‌ಪೋರ್ಟ್, ವೋಟರ್ ಐಡಿ ಕಾರ್ಡ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಯಾವುದೇ ಇತರ ಅಗತ್ಯವಿರುವ ದಾಖಲೆಗಳನ್ನು ಹೊಂದಿರಬೇಕು.
  • ಒಂದು ವೇಳೆ ನೀವು SC-ST ಅಥವಾ OBC ವರ್ಗಕ್ಕೆ ಸೇರಿದವರಾಗಿದ್ದರೆ ನಿಮ್ಮ ಜಾತಿ ಪ್ರಮಾಣಪತ್ರವನ್ನು ಸಹ ಸಲ್ಲಿಸಬೇಕು.
  • ಈ ಸಾಲಕ್ಕೆ 6 ತಿಂಗಳ ಬ್ಯಾಂಕ್ ಸ್ಟೇಟ್‌ಮೆಂಟ್ ಮತ್ತು ಆದಾಯ ಪ್ರಮಾಣಪತ್ರವನ್ನು ಮತ್ತು ನಿಮ್ಮ ವ್ಯಾಪಾರ, ವಿಳಾಸ, ವ್ಯಾಪಾರದ ಯಾವುದೇ ಪುರಾವೆಗಳನ್ನು ನೀವು ಒದಗಿಸಬೇಕು.

ಇದನ್ನು ಓದಿ: ಗೃಹಲಕ್ಷ್ಮೀ ಯೋಜನೆಯ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?: ಮಾಹಿಳೆಯರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಇದಕ್ಕೆ ಯಾವುದೇ ಸ್ಥಿರ ಬಡ್ಡಿ ದರವಿಲ್ಲ. ಸಾಮಾನ್ಯವಾಗಿ ಕನಿಷ್ಠ ಬಡ್ಡಿ ದರವು 12% ಆಗಿದೆ. ನಿಮ್ಮ ವ್ಯಾಪಾರವನ್ನು ಪ್ರಾರಂಭಿಸಲು ನೀವು ಸುಲಭವಾಗಿ ಸಾಲವನ್ನು ಪಡೆಯುತ್ತೀರಿ. ಪ್ರಧಾನ ಮಂತ್ರಿ ಮುದ್ರಾ ಸಾಲ ಯೋಜನೆಯ (Pradhan Mantri Mudra Yojana) ಮೂಲಕ ಸಾಲ ಪಡೆದ ಹಣವು ವ್ಯಾಪಾರ ಉದ್ದೇಶಗಳಿಗಾಗಿ ಮಾತ್ರ ಎಂದು ಗಮನಿಸಬೇಕು. ಮುದ್ರಾ ಸಾಲ ಯೋಜನೆಯಡಿ ನೀವು ಗರಿಷ್ಠ ರೂ.10 ಲಕ್ಷದವರೆಗೆ ಸಾಲ ಪಡೆಯಬಹುದಾಗಿದ್ದು, ಈ ಯೋಜನೆಯಡಿ ಸರ್ಕಾರವು ನಾಗರಿಕರಿಗೆ ಸಹಾಯಧನವನ್ನೂ ನೀಡುತ್ತದೆ.

English Summary: 10 lakh loan without any guarantee under Pradhan Mantri Mudra Loan Scheme. How to apply for Mudra loan scheme introduced by Modi government?

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: RBI ನಲ್ಲಿ ಖಾಲಿ ಹುದ್ದೆಗಳಿಗೆ ಅರ್ಜಿ ಅಹ್ವಾನ – RBI Recruitment 2023

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement