ರಾಜ್ಯದ ಜನತೆಗೆ ಸರ್ಕಾರದಿಂದ ಒಳ್ಳೆಸುದ್ದಿ: ಪ್ರತಿದಿನ 400 ರೂಪಾಯಿ

ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳಿಗೆ ಸ್ವಂತ ಮನೆ ಕಟ್ಟುವ ತರಬೇತಿ ನೀಡುವ ಯೋಜನೆಗೆ ಪ್ರಾರಂಭಿಸಲು ಸರ್ಕಾರದಿಂದ ಸಿದ್ಧತೆ ಪ್ರಾರಂಭವಾಗಿದ್ದು, ಈ ಮೂಲಕ ರಾಜ್ಯದ 73 ತಾಲ್ಲೂಕುಗಳ ಜನರಿಗೆ ಪ್ರಯೋಜನ ಲಭ್ಯವಾಗಲಿದೆ. ಹೌದು, ಪ್ರತಿ ತಾಲ್ಲೂಕಿನಿಂದ…

karnataka vijayaprabha

ಪ್ರಧಾನಮಂತ್ರಿ ಆವಾಸ್ ಯೋಜನೆ ಫಲಾನುಭವಿಗಳಿಗೆ ಸ್ವಂತ ಮನೆ ಕಟ್ಟುವ ತರಬೇತಿ ನೀಡುವ ಯೋಜನೆಗೆ ಪ್ರಾರಂಭಿಸಲು ಸರ್ಕಾರದಿಂದ ಸಿದ್ಧತೆ ಪ್ರಾರಂಭವಾಗಿದ್ದು, ಈ ಮೂಲಕ ರಾಜ್ಯದ 73 ತಾಲ್ಲೂಕುಗಳ ಜನರಿಗೆ ಪ್ರಯೋಜನ ಲಭ್ಯವಾಗಲಿದೆ.

ಹೌದು, ಪ್ರತಿ ತಾಲ್ಲೂಕಿನಿಂದ 30-40 ಕಾರ್ಮಿಕರನ್ನು ಆಯ್ಕೆ ಮಾಡಲಾಗುತ್ತದೆ ಎನ್ನಲಾಗಿದ್ದು, ಇದರಲ್ಲಿ ಸ್ವತಃ ವಸತಿ ಫಲಾನುಭವಿಗಳು ಅಥವಾ ಕಟ್ಟಡ ಕಾರ್ಮಿಕರು ನೋಂದಾಯಿಸಿಕೊಳ್ಳಬಹುದು. ಆಯ್ಕೆಯಾದರಿಗೆ ಊಟೋಪಚಾರದೊಂದಿಗೆ ಪ್ರಯಾಣ ಭತ್ಯೆ 150 ರೂ. & 250 ರೂ. ತರಬೇತಿ ಭತ್ಯೆ ನೀಡಲಾಗುತ್ತದೆ.

ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಸಿಎಂ ಬೊಮ್ಮಾಯಿ:

Vijayaprabha Mobile App free

ಇನ್ನು, ಕೇಂದ್ರದ ಮಹತ್ವಕಾಂಕ್ಷೆಯ ಯೋಜನೆ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ’ ಯಡಿಯಲ್ಲಿ 18 ಲಕ್ಷ ಮನೆಗಳ ನಿರ್ಮಾಣವಾಗುತ್ತಿದ್ದು, ಈ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿನ ಪ್ರವಾಹಕ್ಕೆ ಸಿಲುಕುವ ಮನೆಗಳ ನಿರ್ಮಾಣಕ್ಕೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವಿವಿಧ ಯೋಜನೆಗಳಲ್ಲಿ ಮನೆಗಳ ನಿರ್ಮಾಣ ಕೈಗೊಂಡಿದ್ದು, ಸರ್ಕಾರದಿಂದ ಸಮಾನ ಮೊತ್ತವನ್ನು ನೀಡಲಾಗುವುದು ಎಂದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.