ಈಗಾಗಲೇ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಪೂರ್ವ ಮುಂಗಾರು ಆರಂಭವಾಗಿದ್ದು,ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನು ಓದಿ: ವಿವಾದದ ನಡುವೆಯೂ ಇಂದಿನಿಂದ ರಾಜ್ಯಾದ್ಯಂತ 5, 8ನೇ ತರಗತಿಗೆ ಬೋರ್ಡ್ ಪರೀಕ್ಷೆ
ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನು ಓದಿ: ಪಡಿತರ ಚೀಟಿ ಹೊಂದಿರುವವರಿಗೆ ಗುಡ್ ನ್ಯೂಸ್.. ಮೋದಿ ಸರ್ಕಾರ್ ಮಹತ್ವದ ನಿರ್ಧಾರ!
ಇನ್ನು, ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಂಭವವಿದ್ದು, ಬೆಳಗಿನ ಹೊತ್ತು ಚಳಿಯ ಅನುಭವವಾದರೆ, ಮಧ್ಯಾಹ್ನ ಬಿಸಿಲು ಹೆಚ್ಚಾಗಿರಲಿದ್ದು, ಸಂಜೆ ವೇಳೆ ಮಳೆಯಾಗುವ ಸಂಭವವಿದೆ. ಜೊತೆಗೆ ರಾಜ್ಯದ ಹಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿಗೆ ಹಗುರ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿ: ನರೇಗಾ ಯೋಜನೆ: ಈ ಯೋಜನೆಯಡಿ 2.5 ಲಕ್ಷ ರೂಪಾಯಿ ಸಹಾಯಧನ, ನೂರು ದಿನಗಳ ಉದ್ಯೋಗ, ಜಾಬ್‌ಕಾರ್ಡ್ ಪಡೆಯುವುದು ಹೇಗೆ?
ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಉಷ್ಣಾಂಶವು ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದ್ದು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.