ರಾಜ್ಯಾದ್ಯಂತ ಬಿಸಿಲು ದಿನೇ ದಿನೇ ಹೆಚ್ಚಳವಾಗುತ್ತಿರುವ ನಡುವೆಯೇ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಆರಂಭವಾಗುವ ಲಕ್ಷಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲು ದಿನೇ ದಿನೇ ಹೆಚ್ಚಳವಾಗುತ್ತಿದೆ. ಬಿಸಿಲು ಹೆಚ್ಚಾಗಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವುದರಿಂದ ಉತ್ತರ, ದಕ್ಷಿಣ, ಉಡುಪಿ, ಕರಾವಳಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದ್ದು, ಒಂದೆರಡು ದಿನದಲ್ಲಿ ಗುಡುಗು, ಮಿಂಚು ಸಹಿತ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!
ಕಳೆದ 2 ದಿನದ ಹಿಂದೆ ಕೊಡಗು ಮತ್ತು ಕರಾವಳಿ ಭಾಗದಲ್ಲಿ ತುಂತುರು ಮಳೆಯಾಗಿತ್ತು. ಇನ್ನು, ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ
ಇದನ್ನು ಓದಿ: ಈ ವರ್ಷದಲ್ಲಿ ಒಟ್ಟು 4 ಗ್ರಹಣ: ಈ ವರ್ಷದ ಮೊದಲ ʻಚಂದ್ರಗ್ರಹಣʼ ಯಾವಾಗ ಸಂಭವಿಸಲಿದೆ..? ಇಲ್ಲಿದೆ ನೋಡಿ