ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಗೊರವಪ್ಪ ನಾಗಪ್ಪ ಉರ್ಮಿ ಅವರು ಬಿಲ್ಲನ್ನೇರಿ ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎಂದು ಕಾರ್ಣಿಕ ನುಡಿದಿದ್ದಾರೆ.
ಕಾರ್ಣಿಕೋತ್ಸವ ರಾಜ್ಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದ್ದು, ದೇವರಗುಡ್ಡದ ಕಾರ್ಣಿಕ ನುಡಿಯುವ ಗೊರವಪ್ಪ ನಾಗಪ್ಪ ಉರ್ಮಿ 20 ಅಡಿ ಬಿಲ್ಲನ್ನೇರಿ ಪ್ರತಿವರ್ಷವು ಕಾರ್ಣಿಕ ನುಡಿಯುತ್ತಾರೆ. ಇದನ್ನು ಜನರು ವರ್ಷದ ಭವಿಷ್ಯವಾಣಿ ಎಂದೇ ಕರೆಯುತ್ತಾರೆ.
ಹೌದು, ನಿನ್ನೆ ನಡೆದ ಕಾರ್ಣಿಕದ ಬಗ್ಗೆ ದೇವಾಲಯದ ಅರ್ಚಕ ಮಾಲತೇಶ್ ಭಟ್ ವಿಶ್ಲೇಷಣೆ ನೀಡಿದ್ದು, ‘ಆಕಾಶದ ಗುಡ್ಡಕ್ಕಲೆ ಶಿಶು ಏರಿತಲೆ ಪರಾಕ್’ ಎಂದರೆ ಸಣ್ಣ ಸಣ್ಣ ರೈತರಿಗೂ ಉತ್ತಮವಾಗಲಿದೆ. ಯುವ ರಾಜಕಾರಣಿಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ. ಯುವಕನಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನ ಒಲಿಯಲಿದೆ ಎಂದು ತಿಳಿಸಿದ್ದಾರೆ.