BREAKING : 40% ಕಮಿಷನ್‌ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ಬೆಂಗಳೂರು : ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು (ಸೆಪ್ಟೆಂಬರ್‌…

Kempanna passed away

ಬೆಂಗಳೂರು : ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್‌ ಆರೋಪ ಮಾಡಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು (ಸೆಪ್ಟೆಂಬರ್‌ 19) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹೌದು, ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಸೆ.19ರಂದು ಇಂದು ಬೆಂಗಳೂರಿನ ಜ್ಯೋತಿಪುರದ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರ ಐದು ವರ್ಷ ಪೂರೈಸೋದಿಲ್ಲ; ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ವಿಜೇಯೇಂದ್ರ

Vijayaprabha Mobile App free

ಕೆಂಪಣ್ಣ ಅವರು ಈ ಹಿಂದೆ ಬೊಮ್ಮಾಯಿ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ಆರೋಪ ಮಾಡಿದ್ದು, ಈ ವಿಚಾರ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಸಾಕಷ್ಟು ಆರೋಪ-ಪ್ರತ್ಯಾರೋಪದ ವಿಚಾರವಾಗಿತ್ತು. ಅಷ್ಟೇ ಅಲ್ಲ, ಹಿಂದಿನ ಬೊಮ್ಮಾಯಿ ಸರ್ಕಾರದ ವಿರುದ್ಧ ಕೆಂಪಣ್ಣ ಅವರು ಪ್ರಧಾನಿ ಮೋದಿ ಅವರಿಗೂ ಪತ್ರ ಬರೆದು ದೂರು ನೀಡಿದ್ದರು.

ಅಂದು ಪ್ರತಿಪಕ್ಷವಾಗಿದ್ದ ಕಾಂಗ್ರೆಸ್‌ ರಾಜ್ಯ ಸರ್ಕಾರದ ವಿರುದ್ಧ ಈ ಅಸ್ತ್ರ ಬಳಸಿ ಹೋರಾಟ ನಡೆಸಿತ್ತು. ಅಂತಿಮವಾಗಿ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರುವಲ್ಲಿ ಸಫಲವಾಗಿತ್ತು.

ಇದನ್ನೂ ಓದಿ: ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ: ಯೋಜನೆಗೆ ಅರ್ಜಿ ಸಲ್ಲಿಸಲು ಯಾರು ಅರ್ಹರು?, ಮಾಹಿತಿ ಇಲ್ಲಿದೆ 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.