ಇಂದು ರಾಜಮಾತೆ ವಿಜಯರಾಜೇ ಸಿಂಧಿಯಾ ಜಯಂತಿ; ಪ್ರಧಾನಿ ಮೋದಿಯಿಂದ 100 ರೂ ನಾಣ್ಯ ಬಿಡುಗಡೆ

ನವದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ₹100 ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವದ ವರ್ಚುವಲ್ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತದೆ. ಈ ಕುರಿತು…

Narendra modi vijayaprabha news

ನವದೆಹಲಿ: ರಾಜಮಾತೆ ವಿಜಯರಾಜೇ ಸಿಂಧಿಯಾ ಜನ್ಮಶತಮಾನೋತ್ಸವ ಸ್ಮರಣಾರ್ಥ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ₹100 ನಾಣ್ಯ ಬಿಡುಗಡೆ ಮಾಡಲಿದ್ದಾರೆ. ಬೆಳಗ್ಗೆ 11ಕ್ಕೆ ಜನ್ಮಶತಮಾನೋತ್ಸವದ ವರ್ಚುವಲ್ ಕಾರ್ಯಕ್ರಮದಲ್ಲಿ ನಾಣ್ಯ ಬಿಡುಗಡೆ ಮಾಡಲಾಗುತ್ತದೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದೂ, ಅಕ್ಟೋಬರ್ 12 ರಾಜಮಾತಾ ವಿಜಯ ರಾಜೇ ಸಿಂಧಿಯಾ ಅವರ ಜಯಂತಿ. ಈ ವಿಶೇಷ ದಿನದಂದು ಸ್ಮರಣಾರ್ಥ ನಾಣ್ಯ ರೂ. 100 ಅನ್ನು ಬೆಳಿಗ್ಗೆ 11 ಗಂಟೆಗೆ ಬಿಡುಗಡೆ ಮಾಡಲಾಗುವುದು. ಇದು ಅವರ ಜನ್ಮ ಶತಮಾನೋತ್ಸವದ ಒಂದು ಭಾಗವಾಗಿದೆ ಮತ್ತು ಅವರ ಶ್ರೇಷ್ಠ ವ್ಯಕ್ತಿತ್ವಕ್ಕೆ ಗೌರವ ಸಲ್ಲಿಸುವ ಮತ್ತೊಂದು ಸಂದರ್ಭವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ಗ್ವಾಲಿಯರ್‌ನ ರಾಜಮಾತೆ ವಿಜಯರಾಜೇ ಸಿಂಧಿಯಾ ಅವರು ಲೋಕಸಭೆಗೆ 7 ಬಾರಿ & ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರು.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.