ದಸರಾದಲ್ಲಿ ಪ್ರಧಾನಿ ಮೋದಿ ಪ್ರತಿಮೆ ಸುಟ್ಟ ವಿಚಾರ; ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ತೀವ್ರ ಆಕ್ರೋಶ

ನವದೆಹಲಿ : ದಸರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆ ಸುಟ್ಟ ವಿಚಾರ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ…

j p nadda vijayaprabha news

ನವದೆಹಲಿ : ದಸರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಮೆ ಸುಟ್ಟ ವಿಚಾರ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಸರಣಿ ಟ್ವೀಟ್ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದಡೆ ತಾಯಿ ಪ್ರಜಾಪ್ರಭುತ್ವದ ಮಹತ್ವದ ಬಗ್ಗೆ ಹೇಳ್ತಾರೆ. ಪ್ರಜಾಪ್ರಭುತ್ವದ ಬಗ್ಗೆ ಖಾಲಿ ವಕ್ಚಾತುರ್ಯ ಪ್ರದರ್ಶಿಸುತ್ತಾರೆ. ಮತ್ತೊಂದಡೆ ಮಗ ದ್ವೇಷ, ಆಕ್ರಮಣಶೀಲತೆ ಪ್ರದರ್ಶಿಸುತ್ತಾರೆ. ಕಾಂಗ್ರೆಸ್ ಪಕ್ಷದಲ್ಲಿ ಡಬಲ್ ಸ್ಟ್ಯಾಂಡರ್ಡ್ ಸಮೃದ್ಧವಾಗಿದೆ ಎಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆಪಿ ನಡ್ಡಾ ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ನಿರ್ದೇಶನದ ಮೇರೆಗೆ ಪಂಜಾಬ್ ನಲ್ಲಿ ಪ್ರಧಾನಿ ಮೋದಿ ಅವರ ಪ್ರತಿಕೃತಿ ದಹಿಸಲಾಗಿದೆ. ಪ್ರಧಾನಿ ಮೋದಿ ಪ್ರತಿಮೆ ಸುಡುವ ನಾಟಕ ನಾಚಿಕೆಗೇಡಿನ ಕೆಲಸ ಎಂದು ಜೆಪಿ ನಡ್ಡಾ ಕಿಡಿಕಾರಿದ್ದಾರೆ.

Vijayaprabha Mobile App free

ನೆಹರು, ಗಾಂಧಿ ರಾಜವಂಶವು ಪ್ರದಾನ ಮಂತ್ರಿಯ ಕಚೇರಿಯನ್ನು ಎಂದುಗೂ ಗೌರವಿಸಿಲ್ಲ. 2004 ರಿಂದ 2014 ರ ಯುಪಿಎ ಅವಧಿಯಲ್ಲಿ ಪಿಎಂ ಹುದ್ದೆ ದುರ್ಬಲಗೊಳಿಸಿದ್ದರು ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.