ಪಾಟ್ನಾ: ಬಿಹಾರದ ಪಾಟ್ನಾದ ಶಾಲೆವೊಂದರ ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದ ಆರೋಪಿ ಪ್ರಾಂಶುಪಾಲನಿಗೆ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದ್ದು, ಸಹಶಿಕ್ಷಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ನ್ಯಾಯಾಲಯವು ಆರೋಪಿಗಳಾದ ಪ್ರಾಂಶುಪಾಲ ಅರವಿಂದ್ ಕುಮಾರ್ ಗೆ ಗಲ್ಲು ಶಿಕ್ಷೆಯ ಜೊತೆಗೆ 1ಲಕ್ಷ ರೂ. ದಂಡ ವಿಧಿಸಿದ್ದು, ಸಹಶಿಕ್ಷಕ ಅಭಿಷೇಕ್ ಕುಮಾರ್ ಗೆ ಜೀವಾವಧಿ ಶಿಕ್ಷೆ ಹಾಗೂ 50ಸಾವಿರ ದಂಡ ವಿಧಿಸಿದೆ.
ಪಾಟ್ನಾದಲ್ಲಿ 2018ರಲ್ಲಿ ವಿದ್ಯಾರ್ಥಿನಿಯ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಿಸಿದಾಗ ಅತ್ಯಾಚಾರದ ಪ್ರಕರಣ ಬೆಳಕಿಗೆ ಬಂದಿತ್ತು. ಆ ನಂತರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.