ಹಾಸನ: ಹಾಸನ ಇನ್ಸಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಹಿಮ್ಸ್) ಕಾಲೇಜಿನ ಕರ್ತವ್ಯನಿರತ ಡ್ಯೂಟಿ ಡಾಕ್ಟರ್ ಮೇಲೆ ದೌರ್ಜನ್ಯ ಮಾಡಿರುವ ಆರೋಪ ಹಾಸನ ಮೆಡಿಕಲ್ ಕಾಲೇಜಿನ ಪ್ರೊಫೆಸರ್ಓರ್ವರ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಪ್ರೊ.ಡಾ.ಲೋಕೇಶ್ ಅವರ ವಿರುದ್ಧ ಆರೋಪ ಕೇಳಿ ಬಂದಿದ್ದು, ಮೆಡಿಕಲ್ ಕಾಲೇಜಿನಲ್ಲಿ ತರಬೇತಿ ವೈದ್ಯೆಯಾಗಿ ನೇಮಕಗೊಂಡಿದ್ದ ಯುವತಿ ಮೇಲೆ ಡಾ.ಲೋಕೇಶ್ ಲೈಂಗಿಕ ದೌರ್ಜನ್ಯವೆಸಗಿ, ಬಲವಂತವಾಗಿ ಮುತ್ತು ಕೊಟ್ಟಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಸಂತ್ರಸ್ತೆ ದೂರು ನೀಡಲಾಗಿ ಆರೋಪವು ಮೇಲ್ನೋಟಕ್ಕೆ ಆರೋಪ ಸಾಬೀತಾಗಿರುವ ಹಿನ್ನೆಲೆ ಪ್ರೊ.ಡಾ.ಲೋಕೇಶ್ ಅವರನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಲಾಗಿದೆ.
ಇನ್ನು ಈ ಸಂಬಂಧ ತನಿಖೆ ನಡೆಸಿ ಮೂರು ವಾರಗಳ ಒಳಗೆ ವರದಿ ಸಲ್ಲಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು ಕಾಲೇಜಿನ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ.