ಚೆನ್ನೈ : ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಹೌದು, ಈ ಬಗ್ಗೆ ಮಾತನಾಡಿರುವ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು, ‘ಕರ್ನಾಟಕದ ಹೊಸ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಅಣೆಕಟ್ಟನ್ನು ಕಟ್ಟುವುದಾಗಿ ಹೇಳಿದ್ದಾರೆ.
ನಾವು ಒಂದೇ ಪಕ್ಷದಲ್ಲಿದ್ದರೂ, ಆಗಸ್ಟ್ 5ರಂದು ಕರ್ನಾಟಕ ಸರ್ಕಾರದ ವಿರುದ್ಧ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆ ವಿರೋಧಿಸಿ ಉಪವಾಸ ಪ್ರತಿಭಟನೆ ನಡೆಸುತ್ತೇವೆ’ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.