ಬೆಂಗಳೂರು: ಶಿಕ್ಷಣ ಇಲಾಖೆ SSLC ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 27ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.
ಜೂನ್.27 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ, ಜೂನ್ 28 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಇಂಗ್ಲಿಷ್, ಮರಾಠಿ, ಉರ್ದು, ಸಂಸ್ಕೃತ, ಜೂನ್ 29 ರಂದು ದ್ವೀತಿಯ ಭಾಷೆ (ಇಂಗ್ಲಿಷ್- ಕನ್ನಡ), ಜೂನ್ 30 ರಂದು ಸಮಾಜಶಾಸ್ತ್ರ, ಜುಲೈ 1 ರಂದು ತೃತೀಯ ಭಾಷೆ, ಜುಲೈ 2 ರಂದು ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ ಹಾಗು ಜುಲೈ 4 ರಂದು ಗಣಿತ, ಸಮಾಜಶಾಸ್ತ್ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.