ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರಿಗೆ ಲಸಿಕೆ ನೀಡಬಾರದು; ಕೇಂದ್ರ ಅರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ನವದೆಹಲಿ: ಕರೋನಾ ಲಸಿಕೆ ಬಗ್ಗೆ ಕೇಂದ್ರ ಸರ್ಕಾರ ಶುಕ್ರವಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಈ ಬಗ್ಗೆ ಪತ್ರ ಬರೆದಿದೆ. ಕೋವಿಡ್ -19 ಲಸಿಕೆಗಳ ಕ್ಲಿನಿಕಲ್ ಪ್ರಯೋಗದಲ್ಲಿ…

corona vaccine vijayaprabha

ನವದೆಹಲಿ: ಕರೋನಾ ಲಸಿಕೆ ಬಗ್ಗೆ ಕೇಂದ್ರ ಸರ್ಕಾರ ಶುಕ್ರವಾರ ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಆರೋಗ್ಯ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರ ಪ್ರದೇಶಗಳಿಗೆ ಈ ಬಗ್ಗೆ ಪತ್ರ ಬರೆದಿದೆ.

ಕೋವಿಡ್ -19 ಲಸಿಕೆಗಳ ಕ್ಲಿನಿಕಲ್ ಪ್ರಯೋಗದಲ್ಲಿ ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರನ್ನು ಸೇರಿಸಬಾರದು ಎಂದು ಕೇಂದ್ರ ಸ್ಪಷ್ಟಪಡಿಸಿದೆ. ತುರ್ತು ಸಂದರ್ಭಗಳಲ್ಲಿ ಲಸಿಕೆಯ ಬಳಕೆಯನ್ನು ಕೇಂದ್ರ ಸರ್ಕಾರ ಪತ್ರದಲ್ಲಿ ವಿವರಿಸಿದ್ದು, ನಿರ್ದಿಷ್ಟ ಔಷಧಿಗಳಿಗೆ ಅಲರ್ಜಿ ಅಥವಾ ಅರೋಗ್ಯ ಸಮಸ್ಯೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಕರೋನ ಲಸಿಕೆ ನೀಡಬಾರದು ಎಂದು ಹೇಳಿದ್ದು, ರಕ್ತಸ್ರಾವ ನಿಲ್ಲದಿರುವುದು ಮತ್ತು ರಕ್ತ ಹೆಪ್ಪುಗಟ್ಟುವ ತೊಂದರೆ ಇರುವ ವ್ಯಕ್ತಿಗಳಿಗೆ ಸಹ ಕರೋನ ಲಸಿಕೆ ನೀಡಬಾರದು ಎಂದು ತಿಳಿಸಿದೆ.

ಇನ್ನು ಕರೋನ ಲಸಿಕೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಒಬ್ಬ ವ್ಯಕ್ತಿಗೆ ಮೊದಲ ಡೋಸ್ ನಲ್ಲಿ ನೀಡಿರುವ ಲಸಿಕೆಯನ್ನೇ ಎರಡನೇ ಡೋಸ್ ನಲ್ಲೂ ನೀಡಬೇಕು ಎಂದು ಹೇಳಿದ್ದು ಯಾವುದೇ ಕಾರಣಕ್ಕೂ ಲಸಿಕೆಯನ್ನು ಬದಲಾಯಿಸಬಾರದು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

Vijayaprabha Mobile App free

ಇನ್ನು ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಪ್ರಕ್ರಿಯೆಯು ನಾಳೆ (ಶನಿವಾರ) ಪ್ರಾರಂಭವಾಗಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಬೆಳಿಗ್ಗೆ 10 ಗಂಟೆಗೆ ವರ್ಚುವಲ್ ಮೂಲಕ ಲಸಿಕೆ ನೀಡಲಿದ್ದಾರೆ. ಲಸಿಕೆ ಪ್ರಕ್ರಿಯೆಯು ದೇಶಾದ್ಯಂತ 3,006 ಸ್ಥಳಗಳಲ್ಲಿ ಏಕಕಾಲದಲ್ಲಿ ಪ್ರಾರಂಭವಾಗಲಿದೆ. ಮೊದಲ ದಿನ, ಪ್ರತಿ ಕೇಂದ್ರದಲ್ಲಿ 100 ಜನರಿಗೆ ಕರೋನ ಲಸಿಕೆ ನೀಡಲಾಗುವದು ಎಂದು ಹೇಳಿದ್ದು, ಆರಂಭದಲ್ಲಿ, ಲಸಿಕೆಯನ್ನು ಸಾರ್ವಜನಿಕ ಮತ್ತು ಖಾಸಗಿ ಆರೋಗ್ಯ ಮತ್ತು ಐಸಿಡಿಎಸ್ ಸಿಬ್ಬಂದಿಗೆ ನೀಡಲಾಗುವುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.