ಪಿಯುಸಿ ವಾರ್ಷಿಕ ಪರೀಕ್ಷೆ: ಶುಲ್ಕ ಪಾವತಿಸಲು ದಿನಾಂಕ ವಿಸ್ತರಣೆ ಮಾಡಿದ ಪಿಯು ಬೋರ್ಡ್

ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಈಗಾಗಲೇ ಸಿದ್ದತೆಗಳು ನಡೆಯುತ್ತಿದ್ದು, ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷೆಗೆ ಶುಲ್ಕ ಪಾವತಿಸಲು…

ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಈಗಾಗಲೇ ಸಿದ್ದತೆಗಳು ನಡೆಯುತ್ತಿದ್ದು, ಕಳೆದ ವಾರ್ಷಿಕ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಪರೀಕ್ಷೆಗೆ ಶುಲ್ಕ ಪಾವತಿಸಲು ಇರುವ ದಿನಾಂಕವನ್ನು ವಿಸ್ತರಣೆ ಮಾಡಿ ಪಿಯು ಬೋರ್ಡ್ ಆದೇಶಿಸಿದೆ‌.

ಹಿಂದೆ ವಿದ್ಯಾರ್ಥಿಗಳಿಗೆ ಜನವರಿ 17ರವರೆಗೆ 700 ರೂಪಾಯಿ ದಂಡದೊಂದಿಗೆ ಶುಲ್ಕ ಕಟ್ಟಲು ಅವಕಾಶವಿತ್ತು. ಆದರೆ ಪೋಷಕರು ಹಾಗೂ ವಿದ್ಯಾರ್ಥಿಗಳ ಮನವಿ ಮೇರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅನುತ್ತೀರ್ಣ ಹಾಗೂ ಫಲಿತಾಂಶ ತಿರಸ್ಕರಿಸಿದ ವಿದ್ಯಾರ್ಥಿಗಳು ಈ ತಿಂಗಳ ಅಂತ್ಯದವರೆಗೆ ಶುಲ್ಕ ಪಾವತಿಸಬಹುದಾಗಿದೆ ಎಂದು ತಿಳಿಸಿದೆ.

ಹೌದು, ಅಭ್ಯರ್ಥಿಗಳು ಜನವರಿ 21 ರಿಂದ 31 ರವರೆಗೆ ಕಾಲೇಜಿಗೆ ಶುಲ್ಕ ಪಾವತಿಸಬಹುದಾಗಿದ್ದು, ಕಾಲೇಜಿನವರು ಶುಲ್ಕವನ್ನು ಖಜಾನೆಗೆ ಸಂದಾಯ ಮಾಡಲು ಹಾಗೂ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಲು ಫೆಬ್ರವರಿ 2ರಂದು ಕಡೇ ದಿನವಾಗಿದ್ದು, ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು ಕಚೇರಿಗೆ ಅರ್ಜಿಗಳನ್ನು ಫೆಬ್ರವರಿ 4ರಂದು ಸಲ್ಲಿಸಬೇಕು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.