ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈ

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ https://karresults.nic.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ, ರಿಸಲ್ಟ್…

Result vijayaprabha news

ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ https://karresults.nic.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ, ರಿಸಲ್ಟ್ ನೋಡಬಹುದು.

ಆ.12 ರಿಂದ 25 ರವರೆಗೆ ನಡೆದ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡವರೂ ಸೇರಿದಂತೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 65,223 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ನಗರ ವಿದ್ಯಾರ್ಥಿಗಳದ್ದೇ ಮೇಲುಗೈ:

Vijayaprabha Mobile App free

ಪರೀಕ್ಷೆಗೆ ಹಾಜರಾದ 1,75,905 ವಿದ್ಯಾರ್ಥಿಗಳಲ್ಲಿ 65,233 (37.08%) ಮಂದಿ ಪಾಸ್ ಆಗಿದ್ದು, ಇವರಲ್ಲಿ 36,637 ವಿದ್ಯಾರ್ಥಿಗಳು ಮತ್ತು 28,596 ವಿದ್ಯಾರ್ಥಿನಿಯರು ಪಾಸ್ ಆಗಿದ್ದಾರೆ. ಇದರಲ್ಲಿ ನಗರ ಪ್ರದೇಶದಲ್ಲಿ 37.28% ಮಂದಿ ತೇರ್ಗಡೆಯಾದರೆ, ಗ್ರಾಮೀಣ ಭಾಗದಲ್ಲಿ 36.36% ಮಂದಿ ಪಾಸ್ ಆಗಿದ್ದಾರೆ.

ಇನ್ನು, ಪೂರಕ ಪರೀಕ್ಷೆಯ ಮರು ಮೌಲ್ಯಮಾಪನ ಉತ್ತರ ಪತ್ರಿಕೆ ಪಡೆಯಲು, ಮರು ಮೌಲ್ಯಮಾಪನ ಮತ್ತು ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಇಲಾಖೆ ವೆಬ್‌ಸೈಟ್‌ ಸಂಪರ್ಕಿಸಬಹುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.