ಕೊಲ್ಕತ್ತಾ ಬೌಲರ್ ಗಳ ಬೆವರಿಳಿಸಿದ ಗೇಲ್, ಮಂದೀಪ್; ಪಂಜಾಬ್ ಗೆ 8 ವಿಕೆಟ್ ಭರ್ಜರಿ ಜಯ

ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 46 ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ದ 8…

ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 46 ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ದ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ.

ಕೊಲ್ಕತ್ತಾ ನೈಟ್ ರೈಡರ್ಸ್ ನೀಡಿದ 150 ರನ್ ಗುರಿಯನ್ನು ಬೆನ್ನಟ್ಟಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ 18.5 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 150 ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿತು. ಪಂಜಾಬ್ ಪರ ಆರಂಭಿಕ ಆಟಗಾರರಾದ ಕೆ ಎಲ್ ರಾಹುಲ್ -28 ಮಂದೀಪ್ ಸಿಂಗ್-66* ಹಾಗು ಕ್ರಿಸ್ ಗೇಲ್ -51 ರನ್ ಗಳಿಸಿದರು. ಕೊಲ್ಕತ್ತಾ ಪರ ವರುಣ್ ಚಕ್ರವರ್ತಿ, ಫರ್ಗ್ಯೂಸನ್ ತಲಾ 1 ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್ ಗಳಲ್ಲಿ 9 ಕಳೆದುಕೊಂಡು 149 ರನ್ ಗಳನ್ನು ಕಲೆಹಾಕಿತು. ಕೊಲ್ಕತ್ತಾ ಪರ ಶುಭ್ಮನ್ ಗಿಲ್-57, ಇಯಾನ್ ಮಾರ್ಗನ್-40 ಹಾಗು ಫರ್ಗ್ಯೂಸನ್-24 ರನ್ ಗಳಿಸಿದರು. ಪಂಜಾಬ್ ಪರ ಮಹಮ್ಮದ್ ಶಮಿ 3 ವಿಕೆಟ್, ಕ್ರಿಸ್ ಜೋರ್ಡನ್, ರವಿ ಬಿಶ್ನೋಯ್ ತಲಾ 2 ವಿಕೆಟ್, ಮ್ಯಾಕ್ಸ್ವೆಲ್ ಹಾಗು ಮುರುಗನ್ ಅಶ್ವಿನ್ ತಲಾ 1 ವಿಕೆಟ್ ಪಡೆದರು.

Vijayaprabha Mobile App free

ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ ಕ್ರಿಸ್ ಗೇಲ್ ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.