ಕಲಬುರಗಿ: ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ 2000 ರೂ ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ.
ಹೌದು, ಕಲಬುರಗಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು, ಮುಂದಿನ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು. ಕಾಂಗ್ರೆಸ್‌ನವರು ಅಧಿಕಾರಕ್ಕೆ ಬಂದರೆ 2000 ರೂ ಘೋಷಿಸುವುದಾಗಿ ಹೇಳಿದ್ದರು. ಆದರೆ, ಅವರು ಅಧಿಕಾರಕ್ಕೆ ಬರುವುದಿಲ್ಲ. ಅವರಿಗಿಂತ ಮೊದಲೇ ನಾವು ಈ ಯೋಜನೆ ಜಾರಿಗೊಳಿಸುತ್ತೇವೆ ಎಂದಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.