ನವದೆಹಲಿ : ಆರ್.ಆರ್.ನಗರ ಕ್ಷೇತ್ರದ ಚುನಾವಣೆಯಲ್ಲಿ ಅಕ್ರಮ ನಡೆದಿದೆ, ಮುನಿರತ್ನ ಅವರ ಆಯ್ಕೆ ಅಸಿಂಧುಗೊಳಿಸಿ ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಇಂದು ಪೂರಕ ಆಧಾರವಿಲ್ಲದ ಹಿನ್ನೆಲೆ ಹೈಕೋರ್ಟ್ ರದ್ದುಗೊಳಿಸಿತ್ತು.
ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮುನಿರಾಜುಗೌಡ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇಂದು ಈ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೂಡ ಮುನಿರಾಜುಗೌಡ ಅರ್ಜಿಯನ್ನು ರದ್ದುಗೊಳಿಸಿದೆ.
ನ.3ರಂದು ಆರ್.ಆರ್.ನಗರ ಉಪ ಚುನಾವಣೆ ನಡೆಯಲಿದ್ದು, ಮುನಿರತ್ನ ಅವರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಈ ತೀರ್ಪಿನಿಂದ ಮುನಿರತ್ನ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.ಇನ್ನು ಬಿಜೆಪಿ ಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಕಗ್ಗಂಟಾಗಿದೆ.
ಇನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಡಿ ಕೆ ರವಿ ಪತ್ನಿ ಕುಸುಮ ಅವರು ಸ್ಪರ್ದಿಸುತ್ತಿದ್ದು ತೀವ್ರ ಕುತೂಹಲ ಕೆರಳಿಸಿದೆ.




