ನವದೆಹಲಿ: ಪ್ರತಿಪಕ್ಷಗಳ ತೀವ್ರ ವಿರೋಧದ ನಡೆವೆಯೂ ಇಂದು ರಾಜ್ಯ ಸಭೆಯಲ್ಲಿ ಎರಡು ಕೃಷಿ ಮಸೂದೆಗಳಿಗೆ ಅಂಗೀಕಾರ ದೊರೆತಿದ್ದು, ಕೇಂದ್ರ ಸರ್ಕಾರದ ನಡೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೆಂಡಕಾರಿದ್ದಾರೆ.
ಭೂಮಿಯಿಂದ ಚಿನ್ನ ಬೆಳೆಯುವ ರೈತ ರಕ್ತಸಿಕ್ತ ಕಣ್ಣೀರು ಹಾಕುವಂತೆ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಾಡಿದೆ. ಕೃಷಿ ಮಸೂದೆ ಜಾರಿ ಮಾಡಉವ ಮೂಲಕ ಕೇಂದ್ರ ಸರ್ಕಾರ ರೈತನ ವಿರುದ್ಧ ಮರಣ ದಂಡನೆ ವಿಧಿಸಿದೆ. ಈ ವ್ಯವಸ್ಥೆಯಿಂದ ಪ್ರಜಾಪ್ರಭುತ್ವ ಮುಜುಗರಕ್ಕೊಳಗಾಗಿದೆ ಎಂದು ರಾಹುಲ್ ಗಾಂಧಿ ದೂರಿದ್ದಾರೆ.
ಇಂದು ಕೇಂದ್ರ ಸರ್ಕಾರ ರಾಜ್ಯ ಸಭೆಯಲ್ಲಿ ಅಂಗೀಕಾರ ಪಡೆದ ಪ್ರಮುಖ ಎರಡು ಕೃಷಿ ಮಸೂದೆಗಳು ಕೃಷಿಕರಿಗೆ ಮಾರಕವಾಗಿವೆ ಎಂದು ಕಾಂಗ್ರೆಸ್, ಆಮ್ ಆದ್ಮಿ ಸೇರಿದಂತೆ ವಿವಿಧ ವಿರೋಧ ಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಆದರೆ ಇದನ್ನು ಲೆಕ್ಕಿಸದೇ ಕೇಂದ್ರ ಸರ್ಕಾರ ಧ್ವನಿ ಮತದ ಮೂಲಕ ಎರಡು ಮಸೂದೆಗೆ ಅಂಗೀಕಾರ ಪಡೆದಿದೆ. ಸರ್ಕಾರದ ಈ ನಿರ್ಧಾರಕ್ಕೆ ಹಲವರು ಟೀಕಿಸಿದ್ದಾರೆ.
जो किसान धरती से सोना उगाता है,
मोदी सरकार का घमंड उसे ख़ून के आँसू रुलाता है।राज्यसभा में आज जिस तरह कृषि विधेयक के रूप में सरकार ने किसानों के ख़िलाफ़ मौत का फ़रमान निकाला, उससे लोकतंत्र शर्मिंदा है।
— Rahul Gandhi (@RahulGandhi) September 20, 2020
मोदी सरकार के कृषि-विरोधी ‘काले क़ानून’ से किसानों को:
1. APMC/किसान मार्केट ख़त्म होने पर MSP कैसे मिलेगा?
2. MSP की गारंटी क्यों नहीं?मोदी जी किसानों को पूँजीपतियों का ‘ग़ुलाम’ बना रहे हैं जिसे देश कभी सफल नहीं होने देगा।#KisanVirodhiNarendraModi
— Rahul Gandhi (@RahulGandhi) September 20, 2020
ರಾಜ್ಯದಲ್ಲೂ ರೈತರ ವಿರೋಧ
ಕೋವಿಡ್ ಸಂದರ್ಭದಲ್ಲಿ ಸುಗ್ರೀವಾಜ್ಞೆ ಮೂಲಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆಗೆ ಇತ್ತ ರಾಜ್ಯದಲ್ಲೂ ತೀವ್ರ ವಿರೋಧ ವ್ಯಕ್ತವಾಗಿದೆ. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕವಾಗಿದೆ. ರಾಜ್ಯ ಸರ್ಕಾರ ನಿರ್ಧಾರ ಕೈಬಿಡಬೇಕು ಎಂದು ವಿವಿಧೆಡೆ ಪ್ರತಿಭಟನೆ ನಡೆಯುತ್ತಿವೆ.