ರಾಜ್ಯ, ದೇಶ ಹೆಮ್ಮೆ ಪಡುವಂತೆ ಆಡುತ್ತೇನೆ: ಸರ್ಕಾರಕ್ಕೆ ಥ್ಯಾಂಕ್ಸ್ ಹೇಳಿದ ರಾಹುಲ್

ಬೆಂಗಳೂರು : ರಾಜ್ಯ ಸರ್ಕಾರ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್‍ ಅವರಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದಕ್ಕೆ ಕೆ ಎಲ್ ರಾಹುಲ್ ಅವರು ಭಾವನಾತ್ಮಕವಾಗಿ ಟ್ವೀಟ್ ಮಾಡಿ ರಾಜ್ಯ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ. ಕೆ ಎಲ್…

ಬೆಂಗಳೂರು : ರಾಜ್ಯ ಸರ್ಕಾರ ಭಾರತೀಯ ಕ್ರಿಕೆಟ್ ತಂಡದ ಆಟಗಾರ ಕೆ.ಎಲ್.ರಾಹುಲ್‍ ಅವರಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿದ್ದಕ್ಕೆ ಕೆ ಎಲ್ ರಾಹುಲ್ ಅವರು ಭಾವನಾತ್ಮಕವಾಗಿ ಟ್ವೀಟ್ ಮಾಡಿ ರಾಜ್ಯ ಸರ್ಕಾರಕ್ಕೆ ಧನ್ಯವಾದವನ್ನು ತಿಳಿಸಿದ್ದಾರೆ.

ಕೆ ಎಲ್ ರಾಹುಲ್ ಅವರು, ನನಗೆ ಏಕಲವ್ಯ ಪ್ರಶಸ್ತಿ ಕೊಡಮಾಡಿದ್ದಕ್ಕೆ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಕೋಚ್, ತಂಡದ ಆಟಗಾರರು, ಸ್ನೇಹಿತರು & ಕುಟುಂಬದವರ ಸಹಕಾರವಿಲ್ಲದೆ ಈ ಸಾಧನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಾನು ಇನ್ನೂ ಕಠಿಣ ಪರಿಶ್ರಮದ ಮೂಲಕ ಆಟವಾಡುತ್ತೇನೆ. ಈ ಮೂಲಕ ನಮ್ಮ ರಾಜ್ಯ ಹಾಗೂ ದೇಶ ಹೆಮ್ಮೆ ಪಡುವಂತೆ ಮಾಡುತ್ತೇನೆ ಎಂದು ಭಾವನಾತ್ಮಕವಾಗಿ ತಮ್ಮ ಮನಸ್ಸಿನ ಭಾವನೆಯನ್ನು ಕೆ ಎಲ್ ರಾಹುಲ್ ಅವರು ಹಂಚಿಕೊಂಡಿದ್ದಾರೆ.

Vijayaprabha Mobile App free

ಕೆ ಎಲ್ ರಾಹುಲ್ ಅವರು ಟೀಮ್ ಇಂಡಿಯಾ ಪರ 36 ಟೆಸ್ಟ್ ಪಂದ್ಯಗಳನ್ನು ಆಡಿದ್ದು 2006 ರನ್ ಗಳಿಸಿದ್ದಾರೆ. ಇದರಲ್ಲಿ 5 ಶತಕ ಮತ್ತು 11 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಇಂಡಿಯಾ ಪರ 31 ಏಕದಿನ ಪಂದ್ಯಗಳನ್ನು ಆಡಿದ್ದು 1239 ರನ್ ಗಳಿಸಿದ್ದಾರೆ. ಇದರಲ್ಲಿ 4 ಶತಕ ಮತ್ತು 7 ಅರ್ಧಶತಕ ಸಿಡಿಸಿದ್ದಾರೆ. ಇನ್ನು t20 ಕ್ರಿಕೆಟ್ ನಲ್ಲಿ 41 ಪಂದ್ಯಗಳನ್ನು ಆಡಿದ್ದು 1461 ರನ್ ಗಳಿಸಿದ್ದಾರೆ. ಇದರಲ್ಲಿ 2 ಶತಕ ಸೇರಿದಂತೆ 11 ಅರ್ಧಶತಕಗಳನ್ನು ಸಿಡಿಸಿದ್ದಾರೆ.

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.