Rain Alert : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಮುಂದಿನ 48 ಗಂಟೆ ಕರ್ನಾಟಕದ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮಡಿಕೇರಿ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ: 2024 ಕಳೆದ 120 ವರ್ಷಗಳಲ್ಲೇ ಅತ್ಯಂತ ಬಿಸಿಯಾದ ವರ್ಷ: IMD
Rain Alert : ದೇಶದ ಕೆಲವು ಕಡೆ ಮುಂದಿನ ನಾಲ್ಕು ದಿನ ಭಾರೀ ಮಳೆ
ಇನ್ನು, ದೇಶದ ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರಾಷ್ಟ್ರೀಯ ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ ಮುಂದಿನ 4 ದಿನಗಳ ಕಾಲ ದೇಶದ ಈ ಭಾಗದಲ್ಲಿ ಭಾರೀ ಮಳೆ ಸುರಿಯಲಿದೆ.
ಜ. 2- 6ರ ವರೆಗೆ ಜಮ್ಮು & ಕಾಶ್ಮೀರ, ಮುಜಫರಾಬಾದ್, ಗಿಲ್ಲಿಟ್, ಲಡಾಖ್ ಮತ್ತು ಬಾಲ್ಟಿಸ್ತಾನ್‌ನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ, ಒಡಿಶಾ, ಪಂಜಾಬ್ ಮತ್ತು ಚಂಡೀಗಢದ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Krishi Bhagya Yojana | ರೈತರಿಗೆ ವರದಾನವಾದ ಕೃಷಿ ಭಾಗ್ಯ ಯೋಜನೆ ; ಏನಿದರ ಉದ್ದೇಶ? ಅರ್ಜಿ ಸಲ್ಲಿಸುವುದು ಹೇಗೆ?