ಅಂಡಮಾನ್ ದ್ವೀಪ ಸಮುದ್ರದಲ್ಲಿ ವಾಯುಭಾರ ಕುಸಿತ ತೀವ್ರಗೊಂಡಿದ್ದು, ಇದರ ಪರಿಣಾಮವಾಗಿ ಬೆಂಗಳೂರು ಮತ್ತು ಬೆಂಗಳೂರು ನಗರ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹೌದು, ಇಂದು ಮೋಡ ಮುಸುಕಿದ ವಾತಾವರಣ ಕಂಡುಬರಲಿದ್ದು, ಆಗಾಗ ಜೋರು ಗಾಳಿ ಬೀಸಲಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ. ಇನ್ನು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಒಣ ಹವೆ ಮುಂದುವರಿಯಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.