ಬೆಂಗಳೂರು: ಇಂದಿನಿಂದ ಮೇ 25ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಆಗಲಿದ್ದು, ಬೆಂಗಳೂರು, ರಾಮನಗರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಮೈಸೂರು, ಶಿವಮೊಗ್ಗ, ಕೋಲಾರ, ಮಂಡ್ಯ, ತುಮಕೂರು ಜಿಲ್ಲೆ ಸಹ ಮಳೆಯಾಗಲಿದ್ದು, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನು, ತೌಕ್ತೆ ಚಂಡಮಾರುತದ ನಂತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಹೊತ್ತಿನಲ್ಲಿ ಮಳೆ ಸುರಿಯುತ್ತಿದ್ದು, ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯವ್ಯಾಪಿ ಲೆಕ್ಕಾಚಾರದಲ್ಲಿ ಮಳೆ ಪ್ರಮಾಣ ಕಡಿಮೆ ಆಗಿದೆಯಾದರೂ ಮಲೆನಾಡು, ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪು ಹವೆಯ ಪರಿಣಾಮ ಮಳೆಗಾಲದ ವಾತಾವರಣ ಕಾಣಿಸುತ್ತಿದೆ.