ರಾಜ್ಯದಲ್ಲಿ ಆ.17 ರವರೆಗೆ ಮಳೆ: ಈ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆ!

ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಆ.17 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದೂ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ…

rain-vijayaprabha-news

ಕರ್ನಾಟಕದ ದಕ್ಷಿಣ, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಆ.17 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದೂ ಕೂಡ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಹಳದಿ ಅಲರ್ಟ್​ ಘೋಷಿಸಲಾಗಿದೆ. ಮಲೆನಾಡು, ಕರಾವಳಿಯಲ್ಲಿ ಇಂದು ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನುಳಿದಂತೆ ಬಾದಾಮಿ, ಬಳ್ಳಾರಿ, ಬೆಳಗಾವಿ, ಬೆಂಗಳೂರು ನಗರ, ಬೀದರ್, ಚಿತ್ರದುರ್ಗ, ಧಾರವಾಡ, ಗದಗ, ಗೋಕರ್ಣ, ಹಂಪಿ, ಹಾಸನ, ಹೊನ್ನಾವರ, ಕಲಬುರ್ಗಿ, ಕಾರವಾರ, ಮಡಿಕೇರಿ, ಮಂಡ್ಯ, ಮಂಗಳೂರು, ಮೈಸೂರು, ರಾಯಚೂರು & ವಿಜಯಪುರ ಜಿಲ್ಲೆಯಲ್ಲಿ ಮಳೆಯಾಗಬಹುದು ಎಂದು ತಿಳಿಸಿದೆ.

Vijayaprabha Mobile App free

ಪ್ರಮುಖ ಜಿಲ್ಲೆಗಳ ತಾಪಮಾನ :

ಬೆಂಗಳೂರು: 28-19
ಮಂಗಳೂರು: 29-24
ಶಿವಮೊಗ್ಗ: 27-21
ಬೆಳಗಾವಿ: 24-20
ಮೈಸೂರು: 28-19
ದಾವಣಗೆರೆ: 27-21
ವಿಜಯಪುರ: 28-21
ಕಲಬುರಗಿ: 29-22 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.