ಬೆಂಗಳೂರು: ರಾಜ್ಯದಲ್ಲಿ ಜೂನ್ 2ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಇಂದು ಮತ್ತು ನಾಳೆ ರಾಜ್ಯದ ವಿವಿಧ ಭಾಗದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಜೂನ್ 2ರವರೆಗೂ ಮಳೆಯಾಗಲಿದ್ದು, ಬೆಳಗಾವಿ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ರಾಜ್ಯದಲ್ಲಿ ಜೂನ್ ಮೊದಲ ವಾರ ಮುಂಗಾರು ಮಳೆ ಪ್ರಾರಂಭವಾಗಬಹುದು ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.