ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಾರ್ಚ್ 28 ರ ವರೆಗೂ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದ್ದು ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಶಿವಮೊಗ್ಗದಲ್ಲಿ ಮಾರ್ಚ್ 28 ರ ವರೆಗೆ ಮಳೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಸೇರಿದಂತೆ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಲಿದ್ದು ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನು ಇಂದು ಬೆಂಗಳೂರಲ್ಲಿ ಶುಭ್ರ ಆಕಾಶವಿದ್ದು,ಬಹುಪಾಲು ಬಿಸಿಲು ಕಾಣಿಸಿಕೊಳ್ಳಲಿದ್ದು, ಗರಿಷ್ಟ 34 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹಾಗು ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರಲಿದ್ದು, ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ ಎಂದು ತಿಳಿಸಿದೆ.