ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಜುಲೈ 5ರವರೆಗೂ ಮಳೆ ಅಬ್ಬರ ಮುಂದುವರೆಯುವ ಸಾಧ್ಯತೆಯಿದ್ದು, ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲೂ ಕೂಡ ಜುಲೈ 5ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇನ್ನು, ಕಳೆದ ಒಂದು ವಾರದಿಂದಲೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಮಲೆನಾಡು ಭಾಗವಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 5ರವರೆಗೆ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.