ಬೆಂಗಳೂರು: ಶ್ರೀಲಂಕಾದಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನವಂಬರ್ 6ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೌದು, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ‘ಯೆಲ್ಲೊ ಅಲರ್ಟ್’ ಜಾರಿ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಷ್ಟೇ ಅಲ್ಲದೆ, ಕರಾವಳಿಯ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಇಂದಿನಿಂದ ಮಳೆಯಾಗಲಿದ್ದು, ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ನವಂಬರ್ 6ರಿಂದ ಮಳೆ ಹೆಚ್ಚಾಗಲಿದ್ದು, ಉಳಿದೆಡೆ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.