ಬೆಂಗಳೂರು: ಕೆಲ ರಾಜ್ಯಗಳಿಗೆ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆಯಂತೆ ಇಂದು ತಮಿಳುನಾಡಿನ ಹಲವೆಡೆ ಮಳೆಯಾಗಿದೆ.
ಅಲ್ಲದೆ ರಾಜ್ಯದ ಬೆಂಗಳೂರಿನಲ್ಲೂ ಇಂದು ಬೆಳಗ್ಗೆಯಿಂದ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಮಧ್ಯಾಹ್ನ ಎರಡು ಗಂಟೆ ನಂತರ ಬೆಂಗಳೂರಿನ ವಿಧಾನಸೌಧ, ರಾಜಭವನ ಸುತ್ತಮುತ್ತ, ಯಶವಂತಪುರ, ರಾಜಭವನ, ಮೇಕ್ರಿ ಸರ್ಕಲ್, ಕಬ್ಬನ್ ಪಾರ್ಕ್, ಮಲ್ಲೇಶ್ವರಂ ಸುತ್ತ ಮುತ್ತ ವರುಣಧಾರೆಯಾಗಿದೆ.
ಒಟ್ಟಾರೆ ಬೇಸಿಗೆಯ ಬಿಸಿಲಿನ ಬೇಗೆ ನಡುವೆ ಸಿಲಿಕಾನ್ ಸಿಟಿಗೆ ಮಳೆರಾಯ ತಂಪೆರೆದಿದ್ದಾನೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.