ಬೆಂಗಳೂರು: ರಾಜ್ಯದಲ್ಲಿ ಮಹಾಮಳೆಗೆ ನದಿಗಳು ತುಂಬಿ ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಈಗಾಗಲೇ ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆಯಿಂದ ಪ್ರವಾಹ ಉಂಟಾಗಿದ್ದು ರೈತರು ಬೆಳೆದ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಸಾವಿರಾರು ಮನೆಗಳು ಕುಸಿದು ಬಿದ್ದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಈಗಿರುವಾಗ ಮತ್ತೆ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅ.21 ಮತ್ತು 22ರಂದು ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಮತ್ತೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯ ಜಂಟಿ ನಿರ್ದೇಶಕ ಸಿ.ಎಸ್.ಪಾಟೀಲ್ ಇಂದು ಮಾಹಿತಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಬೀದರ್ & ಕಲಬುರಗಿ ಹಾಗೂ ಕರಾವಳಿ ಜಿಲ್ಲೆಗಳಲ್ಲ ಅಕ್ಟೊಬರ್ .21ರಂದು ಯಲ್ಲೋ ಅಲರ್ಟ್ ಮತ್ತು ಅಕ್ಟೊಬರ್ 22ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಈಗಾಗಲೇ ವಿಪರೀತ ಮಳೆ ಸುರಿದು ಪ್ರವಾಹ ಪರಿಸ್ಥಿತಿ ಉಂಟಾಗಿದೆ.