ಹವಾಮಾನ ಇಲಾಖೆ ರಾಜ್ಯದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜುಲೈ 19ರ ತನಕ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.
ಇನ್ನು, ರಾಜ್ಯದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಕೆಲ ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ನೀಡಿದೆ.
ಇನ್ನು ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಎರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಇನ್ನು, ಸಾಗರ, ಹೊಸನಗರ, ತೀರ್ಥಹಳ್ಳಿ ಭಾಗದಲ್ಲಿ ಅತಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ತುಂಗಾ, ಶರಾವತಿ, ವರದಾ ಮೊದಲಾದ ನದಿಗಳಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪ್ರವಾಹ ಭೀತಿ ಎದುರಾಗುವ ಸಾಧ್ಯತೆಯಿದೆ.