ಬೆಂಗಳೂರು : ನಾಳೆಯಿಂದ 3 ದಿನಗಳ ಕಾಲ ದೇಶದ ದಕ್ಷಿಣ ಪರ್ಯಾಯ ದ್ವೀಪದ ಹಲವು ಭಾಗಗಳು ಮತ್ತು ಭಾರತ ಕೇಂದ್ರಾಡಳಿತ ಪ್ರದೇಶಗಳಲ್ಲಿ 3 ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ, ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಉತ್ತರ ಒಳನಾಡಿನ ಧಾರವಾಡ, ಗದಗ, ಬೀದರ್, ಹಾವೇರಿ, ಬೆಳಗಾವಿ ಭಾಗದಲ್ಲಿ ಸಹ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.