BREAKING NEWS: ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ಬೆಂಗಳೂರು: ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ. ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕೆ ಮುಜುಗರವಾಗಬಾರದು ಎಂದು…

ramesh jarkiholi vijayaprabha

ಬೆಂಗಳೂರು: ಜಲ ಸಂಪನ್ಮೂಲ ಸಚಿವರಾಗಿದ್ದ ರಮೇಶ್ ಜಾರಕಿಹೊಳಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

ರಾಸಲೀಲೆ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷಕ್ಕೆ ಮುಜುಗರವಾಗಬಾರದು ಎಂದು ಹೇಳಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದೇನೆ. ಆರೋಪ ಮುಕ್ತನಾದ ಮೇಲೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ನಿನ್ನೆ ಸಚಿವ ರಮೇಶ್ ಜಾರಕಿಹೊಳಿ ಅವರು ಯುವತಿಯ ಜೊತೆ ಏಕಾಂತದಲ್ಲಿ ಇರುವ ವಿಡಿಯೋ, ಆಡಿಯೋ ತುಣುಕುಗಳ ಸಿಡಿಗಳು ವೈರಲ್ ಆಗಿದ್ದವು.

ಈ ಸಂಬಂಧ ವಿರೋಧ ಪಕ್ಷದ ನಾಯಕರಾದ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಸ್ವತಃ ಬಿಜೆಪಿ ಪಕ್ಷದ ಹಲವು ನಾಯಕರು ಜಾರಕಿಹೊಳಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.