ಬೆಂಗಳೂರು : ತಮ್ಮ ವಿರುದ್ಧದ ಸೆಕ್ಸ್ ಸಿಡಿ ಪ್ರಕರಣ ಸಂಬಂಧ ಸುದ್ದಿಗೋಷ್ಠಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ನನ್ನ ವಿರುದ್ಧ ರಾಜಕೀಯ ಷಡ್ಯಂತ್ರ ನಡೆದಿದ್ದು, ಈ ಸಿಡಿಯನ್ನು ನಾಲ್ಕು ತಿಂಗಳ ಮೊದಲ ಮಾಡಿದ್ದರು. ಆ ಬಗ್ಗೆ ನನಗೆ ತಿಳಿದಿದ್ದರೂ ನಾನು ಹೆದರದೆ ಸುಮ್ಮನಿದ್ದೆ ಎಂದಿದ್ದಾರೆ. ಸಿಡಿ ನೂರಕ್ಕೆ ನೂರರಷ್ಟು ನಕಲಿ. ಇದರಲ್ಲಿ ಯಾವುದೇ ಸತ್ಯವಿಲ್ಲ. ನಾನು ನಿರಾಪರಾಧಿ, ಅಪರಾಧಿಯಲ್ಲ. ನನ್ನ ಪರವಾಗಿ ನಿಂತ ಎಲ್ಲರಿಗೂ ಹೃದಯಪೂರ್ವಕ ವಂದನೆ ಎಂದು ಭಾವುಕರಾದರು.
‘ನನಗೆ 26 ಗಂಟೆ ಮೊದಲೇ ಸಿಡಿ ಬಿಡುಗಡೆ ಬಗ್ಗೆ ಹೈಕಮಾಂಡ್ ಮಾಹಿತಿ ನೀಡಿತ್ತು’:
ಈ ಸಿಡಿ ಬಗ್ಗೆ 4 ತಿಂಗಳ ಮೊದಲೇ ಗೊತ್ತಿತ್ತು ಎಂದಿರುವ ರಮೇಶ್ ಜಾರಕಿಹೊಳಿ, ’26 ಗಂಟೆ ಮೊದಲೇ ಹೈಕಮಾಂಡ್ ನನಗೆ ಸಿಡಿ ಬಿಡುಗಡೆ ಬಗ್ಗೆ ಮಾಹಿತಿ ನೀಡಿತ್ತು’ ಎಂದು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಬಹಳ ದುಃಖದಲ್ಲಿದ್ದೇನೆ. ದಯವಿಟ್ಟು ಇದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಫೆಬ್ರವರಿ 26ರಂದು ನಾನು ಸಚಿವನಾದೆ. 4-5 ದಿನದಿಂದ ಎಲ್ಲ ಬೆಳವಣಿಗೆಗಳನ್ನು ನೋಡುತ್ತಿದ್ದೇನೆ. ರಾಜೀನಾಮೆ ನೀಡಿರುವುದು ನನ್ನ ವೈಯಕ್ತಿಕ ನಿರ್ಧಾರ ಎಂದು ರಮೇಶ್ ಜಾರಕಿಹೊಳಿ ಕಣ್ಣೀರು ಹಾಕಿದ್ದಾರೆ.