ಭಾರತದ ಕ್ರಿಕೆಟ್ ಹಬ್ಬ ಎಂದು ಕರೆಯಲ್ಪಡುವ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇಂದಿನಿಂದ (ಮಾರ್ಚ್ 31) ಶುರುವಾಗಲಿದೆ. ಟೂರ್ನಿಯ ಮೊದಲ ಪಂದ್ಯ ಗುಜರಾತ್ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ಸ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ಸಂಜೆ 7.30ಕ್ಕೆ ಮೊದಲ ಪಂದ್ಯ ಆರಂಭವಾಗಲಿದೆ.
ಇದನ್ನು ಓದಿ: ಎಣ್ಣೆ ಹೊಡೆದಾಗ ಕೊಹ್ಲಿ ಸ್ಥಿತಿ ಹೇಗಿರುತ್ತೆ.. ವಿರಾಟ್ ಕೊಹ್ಲಿ ಕುಡಿತದ ಸೀಕ್ರೆಟ್ ಬಿಚ್ಚಿಟ್ಟ ಪತ್ನಿ ಅನುಷ್ಕಾ ಶರ್ಮಾ
ಅಹಮದಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯದ ಆರಂಭಕ್ಕೂ ಮುನ್ನ ಸಂಜೆ 6 ಗಂಟೆಗೆ ಭರ್ಜರಿ ಮನರಂಜನಾ ಕಾರ್ಯಕ್ರಮ ಜರುಗಲಿದ್ದು, ಖ್ಯಾತ ನಟಿಯರು ಸೊಂಟ ಬಳುಕಿಸಲಿದ್ದು, ಅಭಿಮಾನಿಗಳನ್ನ ರಂಜಿಸಲಿದ್ದಾರೆ.
ಭಾಗಿಯಾಗಲಿದ್ದಾರೆ ಬಾಲಿವುಡ್ ತಾರೆಯರು: ಸೊಂಟ ಬಳುಕಿಸಲಿದ್ದಾರೆ ರಶ್ಮಿಕಾ ಮಂದಣ್ಣ, ಮಿಲ್ಕಿ ಬ್ಯೂಟಿ ತಮನ್ನಾ
ಹೌದು, ಅಹಮದಾಬಾದ್ನಲ್ಲಿ ನಡೆಯಲಿರುವ ಈ ಪಂದ್ಯದ ಆರಂಭಕ್ಕೂ ಮುನ್ನ ಭರ್ಜರಿ ಮನರಂಜನಾ ಕಾರ್ಯಕ್ರಮ ಜರುಗಲಿದ್ದು, ಅದ್ಧೂರಿ ಕಾರ್ಯಕ್ರಮದಲ್ಲಿ ನಟಿ ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ, ಗಾಯಕರಾದ ಅರಿಜಿತ್ ಸಿಂಗ್, ಟೈಗರ್ ಶ್ರಾಫ್ ಮತ್ತು ಕತ್ರಿನಾ ಕೈಫ್ ಭಾಗವಹಿಸಬಹುದು ಎಂದು ಹೇಳಲಾಗುತ್ತಿದೆ. ಅಷ್ಟೇ ಅಲ್ಲ, ವೇದಿಕೆ ಕಾರ್ಯಕ್ರಮದಲ್ಲಿ ಖ್ಯಾತ ನಟಿಯರಾದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಸೊಂಟ ಬಳುಕಿಸಲಿದ್ದಾರೆ.
ಇದನ್ನು ಓದಿ: KPSC ಯಲ್ಲಿ 47 ಸಹಕಾರಿ ಸಂಘಗಳ ನಿರೀಕ್ಷಕರ ಹುದ್ದೆಗಳು; Degree ವಿದ್ಯಾರ್ಹತೆ, ಈಗಲೇ ಅರ್ಜಿ ಸಲ್ಲಿಸಿ
ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉದ್ಘಾಟನಾ ಕಾರ್ಯಕ್ರಮ ನಡೆದಿರಲಿಲ್ಲ. ಈ ವರ್ಷದ ಸಮಾರಂಭವನ್ನು ಅದ್ಧೂರಿಯಾಗಿ ಆಯೋಜಿಸಲು ಬಿಸಿಸಿಐ ಮುಂದಾಗಿದೆ. ರಶ್ಮಿಕಾ ಮಂದಣ್ಣ ಮತ್ತು ತಮನ್ನಾ ಭಾಟಿಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ IPL 2023 ಪೋಸ್ಟರ್ ಹಾಕಿಕೊಂಡು, ಈ ಬಗ್ಗೆ ಖಚಿತಪಡಿಸಿದ್ದಾರೆ. ಈ ವೇಳೆ ಬಿಸಿಸಿಐನ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
ಇದನ್ನು ಓದಿ: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಆನೆ ಕಾವಾಡಿಗ ಹುದ್ದೆಗಳಿಗೆ ಅರ್ಜಿ ಅಹ್ವಾನ; ವಿದ್ಯಾರ್ಹತೆ ಬೇಕಿಲ್ಲ, ಇಂದೇ ಅರ್ಜಿ ಸಲ್ಲಿಸಿ