Ration card: ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಅರ್ಹರನ್ನು ಪರಿಶೀಲಿಸಲಾಗುತ್ತಿದೆ. ಈ ಕಾರ್ಯಕ್ಕೆ ಸುಮಾರು ಒಂದು ತಿಂಗಳ ಕಾಲಾವಕಾಶ ಬೇಕಾಗುತ್ತದೆ. ಹಾಗಾಗಿ ಹೊಸ ಪಡಿತರ ಚೀಟಿ ನೀಡುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ KH ಮುನಿಯಪ್ಪ ತಿಳಿಸಿದ್ದಾರೆ.
ಹೌದು, ಸುದ್ದಿಗಾರರ ಜೊತೆ ಮಾತನಾಡಿದ ಚಿವ KH ಮುನಿಯಪ್ಪ ಅವರು, ಪಡಿತರ ಚೀಟಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗುತ್ತದೆ. ಬಳಿಕ ಅಂತಿಮವಾಗಿ ಅರ್ಹರನ್ನು ಉಳಿಸಿಕೊಳ್ಳಲಾಗುವುದು. ಇನ್ನೊಂದು ತಿಂಗಳಲ್ಲಿ ಇದನ್ನು ಪೂರ್ಣಗೊಳಿಸಿ ನಂತರ ಅನ್ನಭಾಗ್ಯ ಯೋಜನೆಯಡಿ ಆಹಾರ ಕಿಟ್ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: ಮನೆ ಒಡತಿಯರಿಗೆ ಗುಡ್ ನ್ಯೂಸ್; ಗೃಹಲಕ್ಷ್ಮಿಯರ ಖಾತೆಗೆ ₹6,000..!
Ration card ಹೇಗೆ ಅರ್ಜಿ ಸಲ್ಲಿಸುವುದು?
ಹೊಸದಾಗಿ ಅರ್ಜಿ ಸಲ್ಲಿಸಲು https://ahara.kar.nic.in/ ವೆಬ್ ಸೈಟ್ ನಲ್ಲಿ ಮೊಬೈಲ್, ಕಂಪ್ಯೂಟರ್, ಸೇವಾ ಸಿಂಧು ಪೋರ್ಟಲ್ ಗಳಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಪಡಿತರ ಚೀಟಿಯಲ್ಲಿ ಬಿಪಿಎಲ್ ಕಾರ್ಡ್ ಅರ್ಹರು ಯಾರು ಎಂದು ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಹಲವರ ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಲಿದೆ.
ಇದನ್ನೂ ಓದಿ: ವಿದ್ಯಾರ್ಥಿಗಳಿಗೆ SBI ಯಿಂದ ಸಿಗಲಿದೆ 15,000; ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ