Ration card : ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಲು ರೇಷನ್ ಕಾರ್ಡ್(Ration card) ಉಪಯುಕ್ತ ದಾಖಲೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ರೇಷನ್ ಕಾರ್ಡ್ ತಿದ್ದುಪಡಿಯನ್ನು (ration card amendment) ಸುಲಭಗೊಳಿಸಿದೆ.
ಹೌದು, ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಮತ್ತು ತಿದ್ದುಪಡಿ ಮಾಡಲು ಜನವರಿ 31 ಕಡೆಯ ದಿನ ಎನ್ನುವ ಸುಳ್ಳು ಸುದ್ದಿಗಳು ಹರಿದಾಡಿದ್ದವು. ಇದನ್ನು ತಪ್ಪಿಸಲು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ಬಗ್ಗೆ ಸ್ಪಷ್ಟೀಕರಣ ನೀಡಿದೆ. ತಿದ್ದುಪಡಿಗೆ ಪ್ರತಿ ತಿಂಗಳು ಕೂಡ ಅವಕಾಶ ಕಲ್ಪಿಸಲಾಗಿದೆ. ಪ್ರತಿ ತಿಂಗಳ ಮೊದಲ ವಾರ ನೀವು ತಿದ್ದುಪಡಿ ಮಾಡಿಸಿಕೊಳ್ಳಬಹುದು.
ಇದನ್ನೂ ಓದಿ: Sania Mirza | ವಿಚ್ಛೇದನದ ಬಳಿಕ ಸಾನಿಯಾ ಮಿರ್ಜಾ ಪತಿ ಶೋಯೆಬ್ ಮಲಿಕ್‌ರಿಂದ ಪಡೆದ ಜೀವನಾಂಶ ಎಷ್ಟು?
Ration card EKYC : ಶುಲ್ಕವಿಲ್ಲದೇ ಉಚಿತ ಕೆವೈಸಿ
ಆದ್ಯತೆ ಮೇರೆಗೆ ಇ-ಕೆವೈಸಿ ಮಾಡದಿರುವ (ಬಿಪಿಎಲ್) ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇಬೇಕು. ಆದರೆ ಇ-ಕೆವೈಸಿ ನೀಡಲು ಯಾವುದೇ ಶುಲ್ಕವನ್ನು ನೀವು ನೀಡಬೇಕಿಲ್ಲ. ಇದನ್ನು ನ್ಯಾಯಬೆಲೆ ಅಂಗಡಿಗಳ ಮೂಲಕ ಉಚಿತವಾಗಿ ಮಾಡಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸಹಕರಿಸಲು ಕೋರಿದೆ, ಇ-ಕೆವೈಸಿ ಸಂಗ್ರಹಣೆಯನ್ನು ಕರ್ನಾಟಕ ಗ್ರಾಮ ಒನ್ ಗಳಲ್ಲಿ ಸಹ ಇ-ಕೆವೈಸಿ (EKYC) ಮಾಡಿಸಲು ಅವಕಾಶವಿರುತ್ತದೆ ಎಂದು ರಾಜ್ಯ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ: PM Kisan Yojana | ರೈತರಿಗೆ ಸಿಹಿಸುದ್ದಿ, ಇದೇ ದಿನ ರೈತರ ಖಾತೆಗಳಿಗೆ ₹2,000!