ಡಿವಿಲಿಯರ್ಸ್ ಸಿಡಿಲಬ್ಬರದ ಬ್ಯಾಟಿಂಗ್ ಗೆ ತತ್ತರಿಸಿದ ಕೆಕೆಆರ್; ಆರ್ ಸಿಬಿಗೆ 82 ರನ್ ಗಳ ಭರ್ಜರಿ ಗೆಲುವು

ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 28 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ದ 82…

ಶಾರ್ಜಾ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ಶಾರ್ಜಾ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 28 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ವಿರುದ್ದ 82 ರನ್ ಗಳ ಭರ್ಜರಿ ಜಯಭೇರಿ ಬಾರಿಸಿದೆ.

195 ರನ್ ಗೆಲುವಿನ ಗುರಿಯನ್ನು ಬೆನ್ನಟ್ಟಿದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಗಳನ್ನು ಕಳೆದುಕೊಂಡು 112 ರನ್ ಗಳಿಸಿ 82 ರನ್ ಗಳ ಹೀನಾಯ ಸೋಲನುಭವಿಸಿತು. ಕೆಕೆಆರ್ ಪರ ಶುಭ್ಮನ್ ಗಿಲ್ -34, ರಸೆಲ್-16, ತ್ರಿಪಾಠಿ-16 ರನ್ ಗಳಿಸಿದ್ದು ಬಿಟ್ಟರೆ ಉಳಿದವರು ಯಾರು ಎರಡಂಕಿಯನ್ನು ದಾಟಲಿಲ್ಲ. ಆರ್ ಸಿಬಿ ಪರ, ಕ್ರಿಸ್ ಮಾರಿಸ್, ಸುಂದರ್ ತಲಾ 2 ವಿಕೆಟ್, ನವದೀಪ್ ಸೈನಿ, ಉಡಾನ, ಚಾಹಲ್ ಹಾಗು ಸಿರಾಜ್, ತಲಾ ಒಂದು ವಿಕೆಟ್ ಪಡೆದರು.

ಇದಕ್ಕೂ ಮುಂಚೆ ಟಾಸ್ ಗೆದ್ದು, ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ -32, ಅರೋನ್ ಫಿಂಚ್-47, ನಾಯಕ ವಿರಾಟ್ ಕೊಹ್ಲಿ-33*, ಹಾಗೂ ಎಬಿಡಿ ವಿಲಿಯರ್ಸ್-73* ಅವರ ಆಟದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 194 ರನ್ ಗಳಿಸಿತು. ಕೊಲ್ಕತ್ತಾ ನೈಟ್ ರೈಡರ್ಸ್ ಪರ ರಸೆಲ್, ಪ್ರಸಿದ್ದ್ ಕೃಷ್ಣ ತಲಾ 1 ವಿಕೆಟ್ ಪಡೆದರು.

Vijayaprabha Mobile App free

ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ಪರ ಅಮೋಘ ಪ್ರದರ್ಶನ ನೀಡಿದ ಎಬಿಡಿ ವಿಲಿಯರ್ಸ್ ಅವರು ಪಂದ್ಯ ಪುರುಷೋತ್ತಮ ಪ್ರಶಸ್ತಿ ಪಡೆದರು.

ಇದನ್ನು ಓದಿ: ರಶೀದ್ ಖಾನ್ ಅವರ ಪತ್ನಿ ಅನುಷ್ಕಾ ಶರ್ಮಾ..? ಏನಿದರ ಒಳಮರ್ಮ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.