ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ (WPL) ಸತತ ಐವರು ಸೋಲಿನಿಂದ ಕಂಗೆಟ್ಟಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡವು ಕೊನೆಗೂ ಆರನೇ ಪಂದ್ಯದಲ್ಲಿ ಗೆಲುವು ದಾಖಲಿಸಿದೆ.
ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ 13ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಆರ್‌ಸಿಬಿ ತಂಡವು 5 ವಿಕೆಟ್‌ಗಳಿಂದ ಗೆದ್ದು ಬೀಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ ತಂಡದ ನಾಯಕಿ ಸ್ಮೃತಿ ಮಂಧಾನ ಬೌಲಿಂಗ್ ಆಯ್ದುಕೊಂಡಿದ್ದರು.
ಇದನ್ನು ಓದಿ: BIG NEWS: 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ; ಹೈಕೋರ್ಟ್ ಮಹತ್ವದ ತೀರ್ಪು
ಮೊದಲು ಬ್ಯಾಟಿಂಗ್ ಮಾಡಿದ್ದ ಯುಪಿ ವಾರಿಯರ್ಸ್ ತಂಡವು 19.3 ಓವರ್‌ಗಳಲ್ಲಿ ಎಲ್ಲಾ ಹತ್ತು ವಿಕೆಟ್ ನಷ್ಟಕ್ಕೆ 135 ರನ್ ದಾಖಲಿಸಿತ್ತು. ಯುಪಿ ವಾರಿಯರ್ಸ್ ಪರ ಕಿರಣ್ ನವಗಿರೆ 22, ಗ್ರೇಸ್ ಹ್ಯಾರಿಸ್ 46, ದೀಪ್ತಿ ಶರ್ಮಾ 22 ರನ್ ಗಳಿಸಿದರು. ಬೌಲಿಂಗ್‌ನಲ್ಲಿ RCB ಪರ ಪೆರ್ರಿ 3, ಡಿವೈನ್, ಆಶಾ ತಲಾ 2, ಮೇಗನ್, ಶ್ರೇಯಾಂಕಾ ತಲಾ 1 ವಿಕೆಟ್ ಪಡೆದರು.
ಇದಕ್ಕೆ ಉತ್ತರವಾಗಿ ಗುರಿ ಬೆನ್ನತ್ತಿದ ಆರ್‌ಸಿಬಿ ತಂಡವು 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಿ ಗೆಲುವು ದಾಖಲಿಸಿದೆ. RCB ಪರ ಕನಿಕಾ ಅಹುಜಾ (46) ಮತ್ತು ರಿಚಾ ಘೋಷ್ (31) ಮಿಂಚಿದರು. ಯುಪಿ ಬೌಲರ್‌ಗಳ ಪೈಕಿ ದೀಪ್ತಿ ಶರ್ಮಾ 2 ವಿಕೆಟ್ ಪಡೆದರು.
ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ -ನರೇಶ್ LOVE ಟ್ರ್ಯಾಕ್‌ಗೆ BIG ಟ್ವಿಸ್ಟ್!