RCB Victory Celebration : ಐಪಿಎಲ್ 18 ನೇ ಆವೃತ್ತಿಯ ಫೈನಲ್‌ನಲ್ಲಿ PBKS ಮಣಿಸಿ ಮೊದಲ ಬಾರಿಗೆ IPL ಚಾಂಪಿಯನ್ ಆಗಿರುವ RCB ತಂಡದ ಆಟಗಾರರು ಬೆಂಗಳೂರಿಗೆ ಬಂದಿದ್ದಾರೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದ ಮೂಲಕ RCB ಆಟಗಾರರು ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ನೇರವಾಗಿ HAL ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಈ ವೇಳೆ ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ. ವಿಧಾನಸೌಧದ ಬಳಿ ಭಾರೀ ಸಂಖ್ಯೆಯಲ್ಲಿ ಜನರು ಜಮಾವಣೆ ಗೊಂಡಿದ್ದಾರೆ.
RCB ವಿಜಯೋತ್ಸವ: ಟಿಕೆಟ್, ಪಾಸ್ ಇದ್ದವರಿಗೆ ಮಾತ್ರ ಎಂಟ್ರಿ
IPL 2025 ಚಾಂಪಿಯನ್ ಟ್ರೋಫಿ ಮುಡಿಗೇರಿಸಿಕೊಂಡಿರುವ RCB ವಿಜಯೋತ್ಸವ ಅಭಿನಂದನಾ ಸಮಾರಂಭ ಸಂಜೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸಮಾರಂಭದಲ್ಲಿ ಭಾಗವಹಿಸಲು ಅಧಿಕೃತ ಟಿಕೆಟ್ ಮತ್ತು ಪಾಸ್ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗುತ್ತದೆ. ಚಿನ್ನಸ್ವಾಮಿ ಕ್ರೀಡಾಂಗಣದತ್ತ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಾಧ್ಯಮಗಳಿಗೆ ಈ ಹೇಳಿಕೆ ಬಿಡುಗಡೆ ಮಾಡಿದ್ದಾರೆ.