WPL 2024 Final: ಯಾರಾಗಲಿದ್ದಾರೆ ಈ ಬಾರಿಯ ಚಾಂಪಿಯನ್? ಪುರುಷರಿಗಿಂತ ಮೊದಲು ಹೆಣ್ಮಕ್ಕಳಿಗೆಯೇ ಪ್ರಶಸ್ತಿ…!

WPL 2024 Final: ಇಂದು ಡೆಲ್ಲಿ ಕ್ಯಾಪಿಟಲ್ಸ್ & RCB ನಡುವೆ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯ ನಡೆಯಲಿದ್ದು, WPL 2ನೇ ಸೀಸನ್ ಅಂತಿಮ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದು ಭಾರೀ ಕುತೂಹಲ…

rcb-vs-delhi-capitals-WPL-2024-Final

WPL 2024 Final: ಇಂದು ಡೆಲ್ಲಿ ಕ್ಯಾಪಿಟಲ್ಸ್ & RCB ನಡುವೆ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯ ನಡೆಯಲಿದ್ದು, WPL 2ನೇ ಸೀಸನ್ ಅಂತಿಮ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದು ಭಾರೀ ಕುತೂಹಲ ಮೂಡಿಸಿದೆ.

ಇದನ್ನು ಓದಿ: ಕೇಂದ್ರದಿಂದ ಗುಡ್ ನ್ಯೂಸ್.. ಇವರಿಗೆ ಭಾರೀ ಸಂಬಳ ಹೆಚ್ಚಳ ಸೇರಿದಂತೆ ಎರಡು ವರ್ಷದ ಬಾಕಿ ಕೂಡ ಸಿಗಲಿದೆ..!

ಆರಂಭದಿಂದಲೇ ಗೆಲ್ಲುತ್ತಾ ಬಂದಿರುವ ಡೆಲ್ಲಿ, ಗುಜರಾತ್ ತಂಡವನ್ನು ಸೋಲಿಸಿ ಮೊದಲು ಫೈನಲ್ ಪ್ರವೇಶಿಸಿತು. RCB 2ನೇ ಸೆಮಿಫೈನಲ್ ನಲ್ಲಿ ಮುಂಬೈ ತಂಡವನ್ನು ಸೋಲಿಸಿ ಫೈನಲ್ ಗೆ ಲಗ್ಗೆ ಇಟ್ಟಿತ್ತು. ಉಭಯ ತಂಡಗಳ ನಡುವಿನ ಫೈನಲ್ ಪಂದ್ಯ ಇಂದು 7.30ಕ್ಕೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.

Vijayaprabha Mobile App free

WPL 2024 Final: ಯಾರಾಗಲಿದ್ದಾರೆ ಈ ಬಾರಿಯ ಚಾಂಪಿಯನ್?

rcb vs delhi capitals
today rcb vs delhi capitals WPL 2024 Final

ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್‌ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಈ ಫೈನಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ & ಆರ್‌ಸಿಬಿ ಮುಖಾಮುಖಿಯಾಗಲಿವೆ. ಡೆಲ್ಲಿ ಸತತ ಎರಡನೇ ಬಾರಿ ಫೈನಲ್ ತಲುಪಿದರೆ, ಆರ್‌ಸಿಬಿ ಮೊದಲ ಬಾರಿಗೆ ಪ್ರವೇಶಿಸಿದೆ. ಬಲಾಬಲದಲ್ಲಿ ಎರಡೂ ತಂಡಗಳು ಸಮಬಲ ಹೊಂದಿದ್ದು, ಅಂತಿಮ ಕದನ ರೋಚಕವಾಗುವ ಸಾಧ್ಯತೆ ಇದೆ.

ಇದನ್ನು ಓದಿ: ಕಾರು ಲೋನ್ ಪಡೆಯಲು ಎಷ್ಟು CIBIL ಸ್ಕೋರ್ ಬೇಕು? ಕಡಿಮೆ ಬಡ್ಡಿಯಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಇನ್ನು, ಪುರುಷ & ಮಹಿಳೆಯರ ಲೀಗ್‌ನಲ್ಲಿ ಇದುವರೆಗೆ ಒಂದೇ ಒಂದು ಪ್ರಶಸ್ತಿ ಗೆಲ್ಲದ ಉಭಯ ತಂಡಗಳು ಇದೀಗ ಮೊದಲ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕುವ ಅವಕಾಶ ಪಡೆದುಕೊಂಡಿದೆ. ಹೌದು, ಈ ಎರಡೂ ತಂಡಗಳು ಡಬ್ಲ್ಯುಪಿಎಲ್ ಹಾಗೂ ಐಪಿಎಲ್‌ನಲ್ಲಿ ಒಮ್ಮೆಯೂ ಪ್ರಶಸ್ತಿ ಗೆದ್ದಿಲ್ಲ. ಈ ಬಾರಿ ಯಾರು ಗೆದ್ದು ಇತಿಹಾಸ ಸೃಷ್ಟಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

WPL 2024 Final: ಪುರುಷರಿಗಿಂತ ಮೊದಲು ಹೆಣ್ಮಕ್ಕಳಿಗೆಯೇ ಪ್ರಶಸ್ತಿ?

IPLನಲ್ಲಿ ಕಳೆದ 17 ವರ್ಷಗಳಲ್ಲಿ RCB ಚಾಂಪಿಯನ್‌ ಆಗಲೇ ಇಲ್ಲ. 3 ಬಾರಿ ಫೈನಲ್ ತಲುಪಿದರೂ ಪ್ರಶಸ್ತಿ ಗೆದ್ದಿಲ್ಲ. ಆದರೆ, WPLನಲ್ಲಿ RCB ಫೈನಲ್‌ ಪ್ರವೇಶಿಸಿ ದಾಖಲೆ ನಿರ್ಮಿಸಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ಮೀಮ್‌ಗಳು ಹರಿದಾಡುತ್ತಿವೆ. ʻಹೆಣ್ಮಕ್ಕಳೇ ಸ್ಟ್ರಾಂಗು ಗುರು..’ RCBಗೆ ಮೊದಲು ಮಹಿಳೆಯರೇ ಕಪ್ ತರಲಿದ್ದಾರೆʼ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ನಾಯಕಿ ಮಂಧಾನ ʻಪುರುಷ ತಂಡದೊಂದಿಗೆ ನಮ್ಮ ಪೈಪೋಟಿ ಇಲ್ಲʼ ಎಂದಿದ್ದಾರೆ.

ಇದನ್ನು ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಭರ್ಜರಿ ಗುಡ್ ನ್ಯೂಸ್

WPL 2024 Final: ಉಭಯ ತಂಡಗಳ ಸಂಭಾವ್ಯ ಪಟ್ಟಿ ಹೀಗಿದೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ದಿಶಾ ಕಸತ್, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್‌ಹ್ಯಾಮ್, ಶ್ರೇಯಾಂಕಾ ಪಾಟೀಲ್, ಆಶಾ ಸೊಭಾನಾ, ಶ್ರದ್ಧಾ ಪೋಖರ್ಕರ್, ರೇಣುಕಾ ಠಾಕೂರ್ ಸಿಂಗ್, ಸಿಮ್ರಾನ್ ಠಾಕೂರ್ ಸಿಂಗ್ ರಾಯ್, ಶುಭಾ ಸತೀಶ್, ಸಬ್ಬಿನೇನಿ ಮೇಘನಾ, ನಡಿನ್ ಡಿ ಕ್ಲರ್ಕ್, ಕೇಟ್ ಕ್ರಾಸ್, ಏಕ್ತಾ ಬಿಷ್ತ್

ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ: ಮೆಗ್ ಲ್ಯಾನಿಂಗ್(ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸೆ, ಜೆಮಿಮಾ ರಾಡ್ರಿಗಸ್, ಮರಿಝನ್ನೆ ಕಪ್, ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ತಾನಿಯಾ ಭಾಟಿಯಾ(ವಿಕೆಟ್ ಕೀಪರ್), ಶಿಖಾ ಪಾಂಡೆ, ಮಿನ್ನು ಮಣಿ, ಅಶ್ವನಿ ಕುಮಾರಿ, ಅಪರ್ಣಾ ಮೊಂಡಲ್, ಟಿಟಾಸ್ ಸಾಧು, ಸ್ನೇಹಾ ದೀಪ್ತಿ, ಅನ್ನಾಬೆಲ್ ಸದರ್ಲ್ಯಾಂಡ್, ಲಾರಾ ಹ್ಯಾರಿಸ್, ಪೂನಂ ಯಾದವ್

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.