RCB vs KKR: ಕೆಕೆಆರ್‌ ವಿರುದ್ದ ಆರ್‌ಸಿಬಿಗೆ ಹಿನಾಯ ಸೋಲು..!

RCB vs KKR: 2024ರ ಐಪಿಎಲ್‌ (IPL 2024) ಆವೃತ್ತಿಯ 10ನೇ ಪಂದ್ಯದಲ್ಲಿ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಕೆಕೆಆರ್‌ ತಂಡವು 7 ವಿಕೆಟ್‌ಗಳ ಭರ್ಜರಿ ಜಯವನ್ನು ಸಾಧಿಸಿದ್ದು, ಈ…

RCB vs KKR IPL 2024

RCB vs KKR: 2024ರ ಐಪಿಎಲ್‌ (IPL 2024) ಆವೃತ್ತಿಯ 10ನೇ ಪಂದ್ಯದಲ್ಲಿ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಕೆಕೆಆರ್‌ ತಂಡವು 7 ವಿಕೆಟ್‌ಗಳ ಭರ್ಜರಿ ಜಯವನ್ನು ಸಾಧಿಸಿದ್ದು, ಈ ಜಯದೊಂದಿಗೆ ಕೆಕೆಆರ್‌ ತಂಡವು ಸತತ 2ನೇ ಗೆಲುವು ದಾಖಲಿಸಿದೆ.

ಇದನ್ನು ಓದಿ: ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್; ನರೇಗಾ ಕಾರ್ಮಿಕರ ದಿನಗೂಲಿ ಹೆಚ್ಚಳ

ಹೌದು, ಆರ್‌ಸಿಬಿ ನೀಡಿದ 183 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಕೆಕೆಆರ್‌ ತಂಡವು 16.5 ಓವರ್‌ನಲ್ಲಿ 186 ರನ್‌ಗಳಸಿ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ಪರ ವೆಂಕಟೇಶ್ ಅಯ್ಯರ್ 50, ನರೈನ್ 47, ಸಾಲ್ಟ್ 30 ಹಾಗೂ ಶ್ರೇಯಸ್ 39* ರನ್ ಗಳಿಸಿದರು. ಆರ್‌ಸಿಬಿ ಪರ ಯಶ್ ದಯಾಳ್, ಮಾಯಾಂಕ್ ದಾಗರ್ ಹಾಗೂ ವೈಶಾಕ್ ತಲಾ ಒಂದು ವಿಕೆಟ್ ಪಡೆದರು.

Vijayaprabha Mobile App free
RCB vs KKR IPL 2024
RCB vs KKR ipl 2024 kkr win 7 wickets

RCB vs KKR: ವಿರಾಟ್ ಕೊಹ್ಲಿ ಅರ್ಧ ಶತಕ ವ್ಯರ್ಥ

ಇದಕ್ಕೂ ಮೊದಲು, ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು182 ರನ್ ಕಲೆಹಾಕಿತು. ಆರ್‌ಸಿಬಿ ಪರ ಕಿಂಗ್ ಕೊಹ್ಲಿ 83*, ಮ್ಯಾಕ್ ವೆಲ್ 28, ಗ್ರೀನ್ 33, ಕಾರ್ತಿಕ್ 20 ರನ್ ಗಳಿಸಿದರು. ಕೆಕೆಆರ್ ಪರ ಹರ್ಷಿತ್ & ರಸ್ಸೆಲ್ ತಲಾ ಎರಡು ವಿಕೆಟ್ ಪಡೆದರೆ, ನರೈನ್ ಒಂದು ವಿಕೆಟ್ ಪಡೆದರು.

ಇದನ್ನು ಓದಿ: ನಿಮ್ಮಲ್ಲಿ ಈ ಲಕ್ಷಣಗಳಿವೆಯಾ? ಹಾಗಿದ್ರೆ ಎಚ್ಚರ ನಿಮ್ಮ ಕಿಡ್ನಿಗಳನ್ನು ಕಾಪಾಡಿಕೊಳ್ಳಿ..!

ಇನ್ನು, ಕೆಕೆಆರ್ ಪರ ಆಲ್ರೌಂಡರ್ ಪ್ರದರ್ಶನ ನೀಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ಸುನಿಲ್ ನರೇನ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು. ವಿರಾಟ್ ಕೊಹ್ಲಿ ಗಳಿಸಿದ ಅರ್ಧ ಶತಕ ವ್ಯರ್ಥವಾಯಿತು.

RCB vs KKR: ಸೋತರು RCB ಅಪರೂಪದ ದಾಖಲೆ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಸೋತರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಪರೂಪದ ದಾಖಲೆ ಬರೆದಿದೆ. ಹೌದು, ಇಂಡಿಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಆರ್‌ಸಿಬಿ 1500 ಸಿಕ್ಸರ್‌ಗಳನ್ನು ಬಾರಿಸಿದ ಎರಡನೇ ತಂಡವಾಗಿದೆ. ಇಲ್ಲಿಯವರೆಗೆ ಮುಂಬೈ ಇಂಡಿಯನ್ಸ್ ತಂಡ ಮಾತ್ರ ಈ ಪಟ್ಟಿಯಲ್ಲಿತ್ತು.

ಇದನ್ನು ಓದಿ: ಹೆಣ್ಣು ಮಕ್ಕಳಿಗೆ ಸೂಪರ್ ಸ್ಕೀಮ್; ಎಲ್‌ಐಸಿ ಕನ್ಯಾದಾನ ಪಾಲಿಸಿಯ ಬಗ್ಗೆ ನಿಮಗೆಷ್ಟು ಗೊತ್ತು..?

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.