KPSC recruitment 2023: ಕರ್ನಾಟಕ ಲೋಕಸೇವಾ ಆಯೋಗವು (KPSC) ಹೊಸ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದ್ದು, ಈ ನೇಮಕಾತಿ ಅಡಿಯಲ್ಲಿ ಒಟ್ಟು 242 ಅಕೌಂಟ್ಸ್ ಅಸಿಸ್ಟೆಂಟ್ (ಲೆಕ್ಕ ಸಹಾಯಕರ ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯಾರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಇನ್ನು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ಸೈಟ್ kpscrecruitment.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ: ಹಲವಾರು ಹುದ್ದೆಗಳಿಗೆ ಅರ್ಜಿ ಅಹ್ವಾನ; ಮಾರ್ಚ್ 18 ಕೊನೆ ದಿನ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 23-03-2023,
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-04-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 24-04-2023
ಇದನ್ನು ಓದಿ: ಕಬ್ಜ ಸಿನಿಮಾ ಮೂಲಕ ಗ್ರ್ಯಾಂಡ್ ಎಂಟ್ರೀ ಕೊಟ್ಟ ಉಪ್ಪಿ, ಸುದೀಪ್, ಶಿವಣ್ಣ; ಸಿನಿಮಾ ನೋಡಿ ಪ್ರೇಕ್ಷಕ ಪ್ರಭುಗಳು ಹೇಳಿದ್ದೇನು?
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:
ಶೈಕ್ಷಣಿಕ ವಿದ್ಯಾರ್ಹತೆ:- ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು , ಆಯಾ ಹುದ್ದೆಗಳಿಗೆ ಅನುಸೂಚಿಯಲ್ಲಿ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ಹಾಗು ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ
ವಯೋಮಿತಿ:- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು ಎಂದು ಅನುಸೂಚಿಯಲ್ಲಿ ತಿಳಿಸಿದೆ.
ಇದನ್ನು ಓದಿ: Adhar Card:: ರಿಜಿಸ್ಟರ್ ಮೊಬೈಲ್ ಸಂಖ್ಯೆ ಇಲ್ಲದೆಯೂ ‘ಆಧಾರ್’ ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ!