ಶಿಕ್ಷಣ ಇಲಾಖೆಯಿಂದ ಸಿಹಿಸುದ್ದಿ: 15,000 ಶಿಕ್ಷಕರ ಹುದ್ದೆ; ಯಾವ ವಿಷಯಕ್ಕೆ ಎಷ್ಟು?

ಬೆಂಗಳೂರು: ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ ಸಿಕ್ಕಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾ.18 ಅಥವಾ 19ರಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ. ಇನ್ನು, ಶಿಕ್ಷಣ ಸಚಿವ ನಾಗೇಶ್‌ ಶಿಕ್ಷಕರ ನೇಮಕಾತಿ ಬಗ್ಗೆ ಇಂದು ಮಧ್ಯಾಹ್ನ…

teacher-job-vijayaprabha-news

ಬೆಂಗಳೂರು: ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ ಸಿಕ್ಕಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಾ.18 ಅಥವಾ 19ರಂದು ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ಇನ್ನು, ಶಿಕ್ಷಣ ಸಚಿವ ನಾಗೇಶ್‌ ಶಿಕ್ಷಕರ ನೇಮಕಾತಿ ಬಗ್ಗೆ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಲಿದ್ದು, ಅರ್ಜಿ ಸಲ್ಲಿಕೆ, ಸ್ಪರ್ಧಾತ್ಮಕ ಪರೀಕ್ಷೆ ದಿನಾಂಕದ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ. ಒಟ್ಟು 15 ಸಾವಿರ ಶಿಕ್ಷಕರ ಹುದ್ದೆ ಭರ್ತಿಗೆ ಪದವಿ, ಬಿಇಡಿ ಉತ್ತೀರ್ಣ, ಜೊತೆಗೆ ಶಿಕ್ಷಕರ ಅರ್ಹತೆ ಪಾಸ್ ಆದವರೂ ಅರ್ಜಿ ಸಲ್ಲಿಸಬಹುದು.

15,000 ಶಿಕ್ಷಕರ ಹುದ್ದೆ; ಯಾವ ವಿಷಯಕ್ಕೆ ಎಷ್ಟು?

Vijayaprabha Mobile App free

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದ್ದು, ಇದರಲ್ಲಿ 11,500 ಹುದ್ದೆಗಳಿಗೆ ಗಣಿತ & ಸಮಾಜ ವಿಜ್ಞಾನ ಶಿಕ್ಷಕರನ್ನೇ ನೇಮಕ ಮಾಡಲಾಗುತ್ತಿದೆ.

ಉಳಿದಂತೆ, 6,500 ಶಿಕ್ಷಕರು ಗಣಿತ ವಿಷಯಕ್ಕೆ, 5000 ಸಮಾಜ ವಿಜ್ಞಾನ, 2000 ಜೀವ ವಿಜ್ಞಾನ & 1500 ಆಂಗ್ಲ ಭಾಷಾ ವಿಷಯಕ್ಕೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ. ಇನ್ನು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಅತೀ ಹೆಚ್ಚು ಎಂದರೆ 1271 ಹುದ್ದೆ ನೀಡಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.