ಬೆಂಗಳೂರು: ರಾಜ್ಯದಾತ್ಯಂತ ಬಾರಿ ಮಳೆಯಾಗುತ್ತಿರುವ ಹಿನ್ನಲೆ ರಾಜ್ಯದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಎಲ್ಲ ಕಡೆ ಬಾರಿ ಮಳೆಯಾಗುತ್ತಿದ್ದು ನದಿಗಳು ತುಂಬಿ ಅಪಾಯ ಮಟ್ಟ ಮೀರಿ ಹರಿಯುತ್ತವೆ. ಇನ್ನು ರಾಜ್ಯದಲ್ಲಿ ಬಾರಿ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ .
ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ ಹಾಗೂ ವಿಜಯಪುರ ಬಾರಿ ಮಳೆ ಹಿನ್ನಲೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಣೆ ಮಾಡಲಾಗಿದೆ. ಮುಂದಿನ ಎರಡು ದಿನ ಈ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇನ್ನು ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು ಜನಜೀವನ ಅಸ್ತವ್ಯಸ್ತವಾಗಿದ್ದು ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕೊಪ್ಪಳ, ಬೀದರ್, ಹಾವೇರಿ, ಹಾಸನ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮಳೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನು ಓದಿ: ಕ್ರಿಕೆಟ್ ದಂತಕತೆ ಮುತ್ತಯ್ಯ ಮುರಳೀಧರನ್ ಬಯೋಪಿಕ್ ನಲ್ಲಿ ವಿಜಯ್ ಸೇತುಪತಿ; ತಮಿಳುಗರಿಂದ ತೀವ್ರ ವಿರೋಧ..!